ತಕ್ಷಣವೇ ಹಿಂಸಾಚಾರ ನಿಲ್ಲಿಸಿ,ಅರ್ಜಿ ವಿಚಾರಣೆ ನಂತರ; ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ CJI
ಹಿಂಸಾಚಾರದಿಂದ ಏನೆಲ್ಲಾ ಸಂಭವಿಸಲಿದೆ ಎಂಬ ಬಗ್ಗೆ ಸಾಕಷ್ಟು ಅನುಭವಗಳು ಆಗಿವೆ
Team Udayavani, Dec 16, 2019, 11:13 AM IST
ನವದೆಹಲಿ: ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಸೋಮವಾರ ಖಡಕ್ ಸಂದೇಶ ರವಾನಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶ ಅಲಿಗಢ್ ಮುಸ್ಲಿಮ್ ಯೂನಿರ್ವಸಿಟಿ ಮತ್ತು ದಿಲ್ಲಿಯ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕ್ರಮದ ವಿರುದ್ಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸಿಜೆಐ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮೊದಲು ಹಿಂಸಾಚಾರ ನಿಲ್ಲಿಸಿ ಎಂದು ಸೂಚನೆ ನೀಡಿರುವ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆಸುವುದಾಗಿ ಹೇಳಿದೆ. ಹಿಂಸಾಚಾರ ನಿಲ್ಲಿಸಲು ನಾವು ಏನು ಮಾಡಬೇಕು. ಹಿಂಸಾಚಾರದಿಂದ ಏನೆಲ್ಲಾ ಸಂಭವಿಸಲಿದೆ ಎಂಬ ಬಗ್ಗೆ ಸಾಕಷ್ಟು ಅನುಭವಗಳು ಆಗಿವೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಯಾವ ನಿರ್ಧಾರವೂ ಕೈಗೊಳ್ಳುವುದಿಲ್ಲ. ಮೊದಲು ಹಿಂಸಾಚಾರ ನಿಲ್ಲಿಸಿ ಎಂದು ಸಿಜೆಐ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ