Udayavni Special

ಬರುವ ವರ್ಷಾಂತ್ಯಕ್ಕೆ ಹೆಜ್ಜಾಲದಲ್ಲಿ ರೈಲು ದುರಂತ!


Team Udayavani, Aug 14, 2017, 12:04 PM IST

train-accident.jpg

ನವದೆಹಲಿ: ರಾಜಧಾನಿ ಬೆಂಗಳೂರು ನಗರದ ಹೊರವಲಯದಲ್ಲಿರುವ ಹೆಜ್ಜಾಲ ಗ್ರಾಮಕ್ಕೆ 2018ರ ಡಿಸೆಂಬರ್‌ ವೇಳೆಗೆ ಹೊಸ “ವಿಪತ್ತು’ ಕಾದಿದೆ. ಅಲ್ಲಿ ಸಾಲು ಸಾಲಾಗಿ ರೈಲು ಅಪಘಾತ, ಬೆಂಕಿ ದುರಂತ, ಅವಘಡಗಳು ಸಂಭವಿಸಲಿವೆ. ಇಂಥ ವಿಪತ್ತುಗಳು ಸಂಭವಿಸಿದ ಬೆನ್ನಲ್ಲೇ ಅಲ್ಲಿಗೆ ಬರುವ ರಕ್ಷಣಾ ಸಿಬ್ಬಂದಿ, ಸುರಕ್ಷತಾ ಕಾರ್ಯಕರ್ತರು ತಕ್ಷಣ ಕಾರ್ಯಪ್ರವೃತ್ತರಾಗಿ “ವಿಪತ್ತು ನಿರ್ವಹಣೆ’ ನಡೆಸಲಿದ್ದಾರೆ!

ಇದು ಯಾರೋ ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯವಾಣಿ ಎಂಬುದು ನಿಮ್ಮ ಊಹೆಯಾಗಿದ್ದರೆ ಅದು ತಪ್ಪು. ಏಕೆಂದರೆ ಇದು ರೈಲ್ವೆ ಇಲಾಖೆ ಘೋಷಿಸಿರುವ ಹೊಸ ಯೋಜನೆ. ಹೌದು, ರೈಲುಗಳು ಹಳಿ ತಪ್ಪುವುದು, ನದಿಗೆ ಬೀಳುವುದು, ಬೋಗಿಗಳಿಗೆ ಬೆಂಕಿ ಹೊತ್ತಿಕೊಳ್ಳುವುದು ಸೇರಿದಂತೆ ದೇಶದಾದ್ಯಂತ ನಡೆಯುವ ರೈಲ್ವೆ ವಿಪತ್ತುಗಳನ್ನು ನಿರ್ವಹಿಸಲು ನೆರವಾಗುವಂತೆ ಬೆಂಗಳೂರಿನ ಹೊರವಲಯದ ಹೆಜ್ಜಾಲದಲ್ಲಿ “ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ಸುರಕ್ಷತಾ ಗ್ರಾಮ’ವನ್ನು ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ. ವಿಪತ್ತು ನಿರ್ವಹಣೆ ಸಿಬ್ಬಂದಿಗೆ ಪರಿಹಾರ ಕಾರ್ಯಗಳ ಕುರಿತು ತರಬೇತಿ ನೀಡುವುದು ಸೇರಿದಂತೆ ಜಾಗೃತಿ ಹಾಗೂ ಸುರಕ್ಷತೆಗೆ ಸಂಬಂಧಿಸಿದ ಹಲವು ಕಾರ್ಯಾಗಾರಗಳಿಗೆ ಈ ಕೃತಕ ಗ್ರಾಮ ವೇದಿಕೆಯಾಗಲಿದೆ.

44.42 ಕೋಟಿ ರೂ. ವೆಚ್ಚ
“ಸುಮಾರು 3,483 ಜನಸಂಖ್ಯೆ ಹೊಂದಿರುವ ಹೆಜ್ಜಾಲ ಗ್ರಾಮದ 3.32 ಚದರ ಕಿ.ಮೀ ವ್ಯಾಪ್ತಿಯಲ್ಲಿ ಉದ್ದೇಶಿತ “ವಿಪತ್ತು ನಿರ್ವಹಣಾ ಸಂಸ್ಥೆ ಮತ್ತು ಸುರಕ್ಷತಾ ಗ್ರಾಮ’ ಅಭಿವೃದ್ಧಿಪರಿಸಲು 44.42 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪುಗೊಂಡಿದೆ. ಇಲ್ಲಿ ಕೃತಕ ರೈಲ್ವೆ ದುರಂತಗಳನ್ನು ಸೃಷ್ಟಿಸಿ, ಆ ಸಂದರ್ಭದಲ್ಲಿ ಕೈಗೊಳ್ಳುವ ಪರಿಹಾರ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಯಲಿದೆ. ಭವಿಷ್ಯದಲ್ಲಿ ಈ ರೀತಿಯ ಪರಿಹಾರ ಕಾರ್ಯಗಳ ವೇಗ ಹೆಚ್ಚಿಸುವುದು ಮತ್ತು ಸುಧಾರಣೆ ತರುವ ಉದ್ದೇಶದಿಂದ ಈ ಯೋಜನೆ ರೂಪಿಸಿದ್ದು, ಅಣಕು ಪ್ರದರ್ಶನಕ್ಕೆ ಪ್ರಸ್ತುತ ಬಳಕೆಯಲ್ಲಿಲ್ಲದ ಹಳೆಯ ಬೋಗಿಗಳನ್ನು ಬಳಸಲಾಗುತ್ತದೆ,’ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ತರಗತಿಗಳಲ್ಲಿ ಪಠ್ಯ ಬೋಧನೆ ಜೊತೆಗೆ ರೈಲು ಅವಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಸೃಷ್ಟಿಯಾಗುವಂತಹ ನೈಜ ವಾತಾವರಣವನ್ನು ಸೃಷ್ಟಿಸಿ, ವಿವಿಧ ಪರಿಸ್ಥಿತಿ, ಸಂದರ್ಭ ಹಾಗೂ ಹಲವು ಹಂತಗಳಲ್ಲಿ ಸಿಬ್ಬಂದಿಗೆ ಪ್ರಾಯೋಗಿಕ ತರಬೇತಿ ನೀಡುವ ನಿಟ್ಟಿನಲ್ಲಿ ಅನುಕೂಲವಾಗುವಂತೆ ವಿಪತ್ತು ನಿರ್ವಹಣೆ ಗ್ರಾಮವನ್ನು ಅಭಿವೃದ್ಧಿಪಡಿಸಲಾಗುತ್ತದೆ. ವಿಪತ್ತು ಸಂದರ್ಭಗಳ್ಲಲಿ ತಕ್ಷಣದ ರಕ್ಷಣಾ ಕಾರ್ಯಾಚರಣೆ, ವೈದ್ಯಕೀಯ ಪರಿಹಾರ ಮತ್ತು ಬೋಗಿಗಳ ಮರುನಿರ್ಮಾಣ ತಂತ್ರಗಳನ್ನು ಹೇಳಿಕೊಡಲು ಕೃತಕ ಬೋಧನಾ ವಿಧಾನಗಳನ್ನು ಅನುಸರಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಸುರಕ್ಷತಾ ಗ್ರಾಮದಲ್ಲಿ ಏನಿರಲಿದೆ
ಸುರಂಗ, ತಡೆಗೋಡೆಗಳು, ಕಂಬಿ ಕತ್ತರಿಸುವಿಕೆ ಸೇರಿದಂತೆ ಇತರ ಸನ್ನಿವೇಶಗಳು, ರಕ್ಷಣಾ ಕಾರ್ಯಾಚರಣೆಗೆ ನೆರವಾಗುವಂತೆ ರೈಲ್ವೆ ಪ್ಲಾಟ್‌ಫಾರಂಗಳನ್ನು ಸೃಷ್ಟಿಸಲಾಗುತ್ತದೆ. ಒಂದೊಮ್ಮೆ ರೈಲು ನದಿಗೆ ಅಥವಾ ನೀರಿಗೆ ಬಿದ್ದಸಂದರ್ಭದಲ್ಲಿ ಪರಿಹಾರ ಕಾರ್ಯಾಚರಣೆಯ ಅಣಕು ಪ್ರದರ್ಶನ ನೀಡಲು ಅನುಕೂಲವಾಗುವಂಥೆ ನೀರಿನ ಕೊಳ ನಿರ್ಮಿಸಲಾಗುತ್ತದೆ. ಹಾಗೇ ರೈಲು ಅಪಘಾತಗಳ ವಿಶ್ಲೇಷಣೆಗೆ ವರ್ಚುವಲ್‌ ರಿಯಾಲಿಟಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಟಾಪ್ ನ್ಯೂಸ್

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

sene

ಶೋಪಿಯಾನ್ ನಲ್ಲಿ ಸೇನಾಕಾರ್ಯಾಚರಣೆ : ಇಬ್ಬರು ಉಗ್ರರ ಹತ್ಯೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಉತ್ತರಾಖಂಡ್: ವರುಣಾರ್ಭಟ, ಪ್ರವಾಹ, ಭೂಕುಸಿತ: ಸಾವಿನ ಸಂಖ್ಯೆ 46ಕ್ಕೆ ಏರಿಕೆ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಬುದ್ಧನ ನಿರ್ವಾಣ ಸ್ಥಳ;ಕುಶಿನಗರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

ಕಾಶ್ಮೀರದಲ್ಲಿ ಯೋಧರ ಹತ್ಯೆ;ಪಾಕ್ ಜತೆ ಟಿ-20 ಕ್ರಿಕೆಟ್ ಪಂದ್ಯವಾಡ್ತೀರಾ? ಕೇಂದ್ರಕ್ಕೆ ಒವೈಸಿ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Devi Brahmarathotsava celebration

ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.