ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ
Team Udayavani, May 19, 2022, 10:16 AM IST
ಚಂಡೀಗಢ: ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ಕೊಂದು ಹರಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಹರಿಯಾಣದ ಜಜ್ಜರ್ ಬಳಿ ಸಂಭವಿಸಿದೆ.
ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 10 ಮಂದಿನ್ನು ಚಿಕಿತ್ಸೆಗಾಗಿ ರೋಹ್ಟಕ್‌ನ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (ಪಿಜಿಐಎಂಎಸ್) ಕಳುಹಿಸಲಾಗಿದ್ದು, ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬಹದ್ದೂರ್‌ಗಢ್‌ನ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಸೌಕರ್ಯಗಳಿರುವಲ್ಲಿ ವಿದ್ಯಾರ್ಥಿಗಳಿಲ್ಲ; ವಿದ್ಯಾರ್ಥಿಗಳಿರುವಲ್ಲಿ ಸೌಲಭ್ಯಗಳೇ ಇಲ್ಲ
ಸಾವನ್ನಪ್ಪಿದ ಮೂವರು ಮತ್ತು 11 ಮಂದಿ ಗಾಯಗೊಂಡವರು ಕೆಎಂಪಿ ಎಕ್ಸ್‌ಪ್ರೆಸ್ ವೇಯಲ್ಲಿ ದುರಸ್ತಿ ಕೆಲಸ ಮಾಡುವವರು. ಕೆಲಸ ಮುಗಿಸಿದ ಬಳಿಕ ಕಾರ್ಮಿಕರು ರಸ್ತೆ ಬದಿ ಮಲಗಿದ್ದರು. ಈ ವೇಳೆ ಅತೀ ವೇಗದಲ್ಲಿ ಬಂದ ಲಾರಿಯೊಂದು ನಿದ್ರಿಸುತ್ತಿದ್ದ ಕಾರ್ಮಿಕರಿಗೆ ಮೇಲೆ ಹರಿದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತ ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಹದ್ದೂರ್ ಗಢ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ಜು. 1ರಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧ: ರಾಜ್ಯದಲ್ಲೂ ಕಟ್ಟುನಿಟ್ಟಿನ ಜಾರಿಗೆ ಕ್ರಮ
ನೀರಲ್ಲೇ ನಿಂತು ಅಹವಾಲು ಆಲಿಕೆ: ಅಸ್ಸಾಂ ಸಿಲ್ಚಾರ್ನಲ್ಲಿ ಸಿಎಂ ಹಿಮಾಂತ ಪರಿಶೀಲನೆ
ರಾಜಸ್ಥಾನದ ಈ ಎರಡು ಸಮುದಾಯದ ಮದುವೆಗೆ ಡಿಜೆ, ಡೆಕೋರೇಷನ್ ಇಲ್ಲ! ಕಾರಣ ಇಷ್ಟೇ
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು