ಖ್ಯಾತ ಪತ್ರಕರ್ತ ರೋಹಿತ್ ಸರ್ದಾನ ನಿಧನ
Team Udayavani, Apr 30, 2021, 3:27 PM IST
ದೆಹಲಿ: ಆಜ್ ತಕ್ ಸುದ್ದಿವಾಹಿನಿಯ ಪತ್ರಕರ್ತರಾಗಿದ್ದ ರೋಹಿತ್ ಸರ್ದಾನ ಅವರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರಾಗಿದ್ದ ಅವರು ಶುಕ್ರವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಏಪ್ರಿಲ್ 24ರಂದು ರೋಹಿತ್ ಸರ್ದಾನ ಅವರಿಗೆ ಕೊರೊನಾ ಸೋಂಕು ತಗಲಿತ್ತು. ಈ ಬಗ್ಗೆ ಸರ್ದಾನ ಅವರೇ ಟ್ವೀಟ್ ಮಾಡಿದ್ದರು. ಒಂದು ವಾರದ ಹಿಂದೆ ಜ್ವರ ಮತ್ತು ಇತರ ಲಕ್ಷಣ ಕಾಣಿಸಿಕೊಂಡಾಗ ಪರೀಕ್ಷೆ ನಡೆಸಿದೆ. RTPCR ನೆಗೆಟಿವ್ ಬಂತು. CTScan ಮಾಡಿಸಿದಾಗ ಕೊವಿಡ್ ಇರುವುದು ದೃಢಪಟ್ಟಿದೆ. ಈಗ ಆರೋಗ್ಯ ಸುಧಾರಿಸಿದೆ. ನೀವು ಕೂಡಾ ನಿಮ್ಮ ಮತ್ತು ನಿಮ್ಮ ಕುಟುಂಬದ ಕಾಳಜಿ ವಹಿಸಿ ಎಂದಿದ್ದರು.
ರೋಹಿತ್ ನಿಧನ ಸುದ್ದಿಯನ್ನು ಜೀ ನ್ಯೂಸ್ನ ಪ್ರಧಾನ ಸಂಪಾದಕ ಸುಧೀರ್ ಚೌಧರಿ ಟ್ವೀಟ್ ಮಾಡಿದ್ದು, ಕೆಲವು ಹೊತ್ತಿನ ಹಿಂದೆ ಇವಾನ್ ಕರೆ ಮಾಡಿ ವಿಷಯವೊಂದನ್ನು ಹೇಳಿದಾಗ ನನ್ನ ಕೈಕಾಲು ಕಂಪಿಸಿತು. ನನ್ನ ಗೆಳೆಯ ಹಾಗು ಸಹೋದ್ಯೋಗಿ ರೋಹಿತ್ ಸರ್ದಾನ ಅವರ ನಿಧನ ಸುದ್ದಿಯಾಗಿತ್ತು ಅದು . ನಮ್ಮ ಆಪ್ತರೊಬ್ಬರು ವೈರಸ್ಗೆ ಬಲಿಯಾಗುತ್ತಾರೆ ಎಂದು ಊಹಿಸಿರಲಿಲ್ಲ. ಈ ಸುದ್ದಿಯನ್ನು ಸ್ವೀಕರಿಸಲು ನಾನು ಸಿದ್ಧನಿರಲಿಲ್ಲ. ಭಗವಂತ ಮೋಸ ಮಾಡಿಬಿಟ್ಟ ಎಂದು ಬರೆದಿದ್ದಾರೆ
ರೋಹಿತ್ ಸರ್ದಾನ ನಿಧನ ಬಗ್ಗೆ ಸಂತಾಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ , ದೇಶವು ಇಂದು ಧೈರ್ಯಶಾಲಿ, ಪಕ್ಷಾತೀತ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಕಳೆದುಕೊಂಡಿದೆ. ಈ ನಷ್ಟ ಭರಿಸಲು ಭಗವಂತ ಅವರ ಕುಟುಂಬಕ್ಕೆ ಶಕ್ತಿ ನೀಡಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ