ಬಾರಾಬಂಕಿ : ಬೈಕ್ ಗಳು ಢಿಕ್ಕಿಯಾದಾಗ ಟ್ರಕ್ ಹರಿದು ಐವರ ಸಾವು
Team Udayavani, Jul 30, 2022, 8:00 PM IST
ಬಾರಾಬಂಕಿ: ಉತ್ತರಪ್ರದೇಶದ ಬಿಂದೌರಾ ಗ್ರಾಮದಲ್ಲಿ ಎರಡು ದ್ವಿಚಕ್ರವಾಹನಗಳು ಮುಖಾಮುಖಿ ಢಿಕ್ಕಿಯಾದ ಬಳಿಕ ವೇಗವಾಗಿ ಬಂದ ಟ್ರಕ್ ಹರಿದು ಐವರು ಸಾವನ್ನಪ್ಪಿದ ಭೀಕರ ಅವಘಡ ಶನಿವಾರ ನಡೆದಿದೆ.
ಮೋಟರ್ ಸೈಕ್ಲಿಸ್ಟ್ ಗಳು ಅಪಘಾತವನ್ನು ತಡೆಯುವಷ್ಟರಲ್ಲಿ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದಿದೆ. ಮಸೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು,ಪೊಲೀಸರ ಪ್ರಕಾರ, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಬಾರಾಬಂಕಿ ನಿವಾಸಿ ಪ್ರಶಾಂತ್ ದುಬೆ ಮತ್ತು ಗೊಂಡಾ ಜಿಲ್ಲೆಯ ಪಂಕಜ್ ಮಿಶ್ರಾ ಎಂದು ಗುರುತಿಸಲಾಗಿದ್ದು, ಇನ್ನೊಂದು ಬೈಕ್ ನಲ್ಲಿದ್ದ ದೀಪಕ್ ಗೌತಮ್ (28), ಅಭಿಷೇಕ್ ಗೌತಮ್ (23) ಮತ್ತು ಶಿವಕರನ್ ಗೌತಮ್ (32) ಎಂದು ಗುರುತಿಸಲಾಗಿದೆ.
ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಟ್ರಕ್ ಚಾಲಕನನ್ನು ಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?