ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮದ ನಡುವಲ್ಲೇ ಅಸ್ಸಾಂನ 2 ಕಡೆ ಬಾಂಬ್ ಸ್ಪೋಟ

Team Udayavani, Jan 26, 2020, 11:16 AM IST

ಅಸ್ಸಾಂ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಆಚರಿಸುತ್ತಿರುವ ನಡುವಲ್ಲೇ ಅಸ್ಸಾಂ ಧಿಬ್ರು ಗಡ್ ಪ್ರದೇಶದಲ್ಲಿ 2 ಬಾಂಬ್ ಸ್ಪೋಟಗೊಂಡಿರುವುದಾಗಿ ವರದಿಯಾಗಿದೆ.

ಅಸ್ಸಾಂನ ರಾಷ್ಟ್ರೀಯ ಹೆದ್ದಾರಿ 37ರ ಬಳಿಯಿರುವ ಗ್ರಹಮ್ ಬಜಾರ್ ಹಾಗೂ ಗುರುದ್ವಾರದ ಧಿಬ್ರುಗಡ್ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದೆ. ಸ್ಥಳಕ್ಕೆ ಬಾಂಬ್ ನಿಗ್ರಹ ದಳ, ಪೊಲೀಸರು ದೌಡಾಯಿಸಿದ್ದು ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವುದಾಗಿ ವರದಿಯಾಗಿಲ್ಲ.

ಈ ಕುರಿತು ಹೇಳಿಕೆ ನೀಡಿದ ಅಸ್ಸಾಂ ಡಿಜಿಪಿ ಭಾಸ್ಕರ್ ಜ್ಯೋತಿ ಮಹಂತಿಯವರು, ಧಿಬ್ರುಗಢ್ ಪ್ರದೇಶದಲ್ಲಿ ಸ್ಪೋಟವಾಗಿರುವ ಮಾಹಿತಿ ಬಂದಿದ್ದು ತನಿಖೆ ಆರಂಭವಾಗಿದೆ. ಈ ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆಂದು ಶೀಘ್ರದಲ್ಲಿ ಪತ್ತೆಹಚ್ಚಲಾಗುವುದು  ಎಂದು ಪ್ರತಿಕ್ರಿಯಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ