ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಮೂವರು ಸಾವು
ಮಾಲ್ವಾನಿಯಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಅಂತಸ್ತಿನ ಕಟ್ಟಡವೊಂದು ಭಾರೀ ಮಳೆಗೆ ಕುಸಿದು ಬಿದ್ದಿತ್ತು.
Team Udayavani, Jul 16, 2020, 5:37 PM IST
ಮಹಾರಾಷ್ಟ್ರ: ಭಾರೀ ಮಳೆಯಿಂದಾಗಿ ಎರಡು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಮುಂಬೈನ ಮಲಾಡ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಕಟ್ಟಡದ ಅವಶೇಷಗಳ ಅಡಿಯಲ್ಲಿ ನಾಲ್ವರು ಸಿಕ್ಕಿಬಿದ್ದಿರುವುದಾಗಿ ವರದಿ ಬಂದಿತ್ತು. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳ, ರಕ್ಷಣಾ ವ್ಯಾನ್ ಮತ್ತು ಆ್ಯಂಬುಲೆನ್ಸ್ ಆಗಮಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಲಾಡ್ ನ ಅಬ್ದುಲ್ ಹಮೀದ್ ಮಾರ್ಗದ ಮಾಲ್ವಾನಿಯಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಅಂತಸ್ತಿನ ಕಟ್ಟಡವೊಂದು ಭಾರೀ ಮಳೆಗೆ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ಐದಾರು ಮಂದಿ ಅವಶೇಷಗಳಡಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತಿಬ್ಬರನ್ನು ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?