ಶ್ರೀನಗರ: ಐದು ಗಂಟೆ ಕಾರ್ಯಾಚರಣೆ, ಭದ್ರತಾಪಡೆ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
ಬಳಿಕ ನಡೆದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, May 17, 2021, 1:43 PM IST
ನವದೆಹಲಿ: ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯ ಖೋನ್ ಮೋಹ್ ಪ್ರದೇಶದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಸೋಮವಾರ(ಮೇ 17) ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚಾಕೊಲೆಟ್ ತಿನ್ನಲು ಎಷ್ಟು ಸಿಹಿಯೋ, ಜಾಸ್ತಿಯಾದ್ರೆ ಆರೋಗ್ಯಕ್ಕೆ ಅಷ್ಟೇ ಕಹಿ..!
ಸುಮಾರು ಐದು ಗಂಟೆಗಳ ಕಾಲ ನಡೆದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಸ್ಥಳೀಯ ನಿವಾಸಿಗಳು, ಅಲ್ ಬದರ್ ಭಯೋತ್ಪಾದಕ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತ್ಯೆಗೀಡಾಗಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಖೋನ್ ಮೋಹ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿತ್ತು.
ಭದ್ರತಾ ಪಡೆ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಸುಮಾರು ಐದು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿತ್ತು. ಬಳಿಕ ನಡೆದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ