PFI: ನಿಷೇಧಿತ ಪಿಎಫ್ ಐ ಸಂಘಟನೆಯ ಇಬ್ಬರು ಪ್ರಮುಖ ನಾಯಕರ ಬಂಧನ
Team Udayavani, Apr 8, 2023, 12:14 PM IST
ಗುವಾಹಟಿ: ನಿಷೇಧಿತ ಪಿಎಫ್ ಐ ಸಂಘಟನೆಯ ಇಬ್ಬರು ಪ್ರಮುಖ ನಾಯಕರನ್ನು ಅಸ್ಸಾಂನ ಬಾರ್ಪೇಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪಿಎಫ್‌ಐ ಅಸ್ಸಾಂ ಘಟಕದ ಅಧ್ಯಕ್ಷರಾಗಿದ್ದ ಅಬು ಸಮಾ ಅಹ್ಮದ್ , ನಿಷೇಧಿತ ಗುಂಪಿನ ರಾಜ್ಯ ಕಾರ್ಯದರ್ಶಿಯಾಗಿದ್ದ ಜಾಕಿರ್ ಹುಸೇನ್ ಬಂಧಿತ ನಾಯಕರು. ಇವರೊಂದಿಗೆ ಪೊಲೀಸರು ಮತ್ತೊಂದು ನಿಷೇಧಿತ ಗುಂಪು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (ಸಿಎಫ್‌ಐ) ನಾಯಕ ಸಾಹಿದುಲ್ ಇಸ್ಲಾಂನನ್ನು ಕೂಡ ಬಂಧಿಸಿದ್ದಾರೆ.
ಬಂಧಿತರಿಂದ 1.5 ಲಕ್ಷ ರೂ. ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಕರಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ಕೇಂದ್ರವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪಿಎಫ್ ಐ ಸಂಘಟನೆಯನ್ನು ನಿಷೇಧಿಸಿತ್ತು.
ಇದನ್ನೂ ಓದಿ: ಚನ್ನಗಿರಿ: ಕಾಡಾನೆ ದಾಳಿಗೆ ಯುವತಿ ಬಲಿ
ಪಿಎಫ್ ಐ ಮತ್ತು ಅದರ ಅಂಗಸಂಸ್ಥೆಗಳು “ದೇಶದ ಸಮಗ್ರತೆ, ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತಂದು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಭಂಗ ತರುವ ಸಾಮರ್ಥ್ಯವನ್ನು ಹೊಂದಿವೆ ಎಂದು ಗೃಹ ಸಚಿವಾಲಯ ಹೇಳಿತ್ತು.
ಪಿಎಫ್‌ಐ ಜೊತೆ ರೆಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CF), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್, ಕೇರಳ ಮುಂತಾದ ಸಂಘಟನೆಗಳನ್ನೂ ಕೇಂದ್ರ ನಿಷೇಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…