ಉದಯಪುರ: ಮಗುವಿನ ಹೆಸರೇ ಕಾಂಗ್ರೆಸ್‌ ಜೈನ್‌

Team Udayavani, Jan 22, 2020, 6:40 PM IST

ಸಾಂದರ್ಭಿಕ ಚಿತ್ರ.

ಉದಯಪುರ: ಹುಟ್ಟಿದ ಮಗುವಿಗೆ ಹೆಸರು ಇರಿಸುವ ಬಗ್ಗೆ ಹೆತ್ತವರು ತಲೆಕೆಡಿಸಿಕೊಳ್ಳುತ್ತಾರೆ. ಎರಡು ಅಕ್ಷರಗಳೇ ಇರಬೇಕು, ವಿಶೇಷವಾಗಿರಬೇಕು ಹೀಗೆ ಹಲವಾರು ಲೆಕ್ಕಾಚಾರಗಳನ್ನು ಮಾಡುತ್ತಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಕಚೇರಿಯ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುವ ವಿನೋದ್‌ ಜೈನ್‌ ಎಂಬುವರು ತಮ್ಮ ಮಗುವಿಗೆ “ಕಾಂಗ್ರೆಸ್‌ ಜೈನ್‌’ ಎಂಬ ಹೆಸರು ಇರಿಸಿದ್ದಾರೆ.

“ಬಹಳ ಕಾಲದಿಂದ ನಾನು ಮತ್ತು ನನ್ನ ಕುಟುಂಬ ಕಾಂಗ್ರೆಸ್‌ ಜತೆಗೆ ಗುರುತಿಸಿಕೊಂಡಿದೆ. ಹೀಗಾಗಿ, ಮಗುವಿಗೆ ಕಾಂಗ್ರೆಸ್‌ ಜೈನ್‌ ಎಂಬ ಹೆಸರು ಇರಿಸಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.

2019ರ ಜುಲೈನಲ್ಲಿ ಜನಿಸಿದ ಮಗುವಿನ ಜನನ ಪ್ರಮಾಣ ಪತ್ರದಲ್ಲಿಯೂ ಅದೇ ಹೆಸರು ಇದೆ ಎಂದು ತಂದೆ ವಿನೋದ್‌ ಜೈನ್‌ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಕಾಂಗ್ರೆಸ್‌ ಬಗ್ಗೆ ಕುಟುಂಬದಲ್ಲಿ ಒಲವು ಇದ್ದರೂ, ಮಗುವಿಗೆ ಹೆಸರು ಇರಿಸುವ ವಿಚಾರದಲ್ಲಿ ಸಹಮತ ತೋರಿಸಲಿಲ್ಲ. ಆದರೂ ತಾವೇ ಮುತುವರ್ಜಿ ವಹಿಸಿ ಅದರ ಬಗ್ಗೆಯೇ ಪಟ್ಟು ಹಿಡಿದಿದ್ದಾಗಿ ಹೇಳಿಕೊಂಡಿದ್ದಾರೆ. ನಿರಂತರವಾಗಿ ಜನರ ಸೇವೆ ಮಾಡುತ್ತಿರುವ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ತಮಗೆ ಸ್ಫೂರ್ತಿ ಎಂದು ಹೇಳಿಕೊಂಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮನದ ಮೂಲೆಯಲ್ಲಿ ಇಡಿಸೂಡಿ ಹಿಡಿದ ಕೈಯೊಂದು ಮನೆಯ ಮೂಲೆಮೂಲೆಗಳನ್ನು ಸ್ವತ್ಛಗೊಳಿಸುತ್ತಿರುವಂತೆ ಭಾಸವಾದಾಗ ಒಂದು ಕ್ಷಣ ಯೋಚನೆಯಲ್ಲೇ ಮುಳುಗಿ ಹೋಯ್ತು ಮನ....

  • ಹುಬ್ಬಳ್ಳಿ: ಉತ್ತರಾಧಿಕಾರಿ ನೇಮಕ ವಿಚಾರ, ತಮ್ಮ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡುವ ನಿಟ್ಟಿನಲ್ಲಿ ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ,...

  • ಜಾಗತಿಕ ಮಟ್ಟದಲ್ಲಿ ಬೆಂಗಳೂರು ಬೆಳೆಯುತ್ತಿದೆ. ದೇಶದ ನಾನಾ ಭಾಗಗಳಿಂದ ಜನ ಇಲ್ಲಿಗೆ ಬಂದು ನೆಲೆಸಿದ್ದಾರೆ. ಬದುಕಿರುವಾಗ ಹೇಗೋ ನೆಲೆ ಸಿಗುತ್ತಿದೆ. ಆದರೆ ಅದೇ...

  • ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ...

  • ಬೆಂಗಳೂರು: ಹುಳಿಮಾವು ಕೆರೆ ದುರಂತ ಸಂಭವಿಸಿ ಇಂದಿಗೆ (ಫೆ.24)ನಾಲ್ಕು ತಿಂಗಳಾಗಲಿದೆ. ಆದರೆ, ಇದಕ್ಕೆ "ಪರೋಕ್ಷವಾಗಿ ಕಾರಣರಾದ ಪಾಲಿಕೆಯ ಕೆರೆ ವಿಭಾಗದ ಅಧಿಕಾರಿಗಳ'...