ಕೊನೆ ಕ್ಷಣದ ಬದಲಾವಣೆ : ಔರಂಗಾಬಾದ್- ಸಂಭಾಜಿ ನಗರ, ಒಸ್ಮಾನಾಬಾದ್- ಧಾರಶಿವ್
ವಿಶ್ವಾಸ ಮತಕ್ಕೆ ಮನಸ್ಸಿಲ್ಲ; ಉದ್ದವ್ ಠಾಕ್ರೆ ರಾಜೀನಾಮೆ ಸಾಧ್ಯತೆ
Team Udayavani, Jun 29, 2022, 7:13 PM IST
ನವದೆಹಲಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು ರಾಜಕೀಯ ಬಿರುಗಾಳಿಯ ನಡುವೆ ಗುರುವಾರ ಕ್ಯಾಬಿನೆಟ್ ಸಭೆ ನಡೆಸಿದರು. ಸಭೆಯಲ್ಲಿ ಔರಂಗಾಬಾದ್ ಅನ್ನು ಸಂಭಾಜಿ ನಗರ ಮತ್ತು ಒಸ್ಮಾನಾಬಾದ್ ಅನ್ನು ಧಾರಶಿವ್ ಎಂದು ಮರುನಾಮಕರಣ ಮಾಡಲು ಅನುಮೋದಿಸಲಾಗಿದೆ. ನವಿ ಮುಂಬೈ ವಿಮಾನ ನಿಲ್ದಾಣದ ಹೆಸರನ್ನು ಡಿಬಿ ಪಾಟೀಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಲಾಗುವುದು ಎಂದು ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ, ಕಾಂಗ್ರೆಸ್ ಸಚಿವರು ಪುಣೆ ಸಿಟಿಗೆ ಜಿಜಾವು ನಗರ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದರು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಹೇಳಿಕೊಂಡಿದೆ.
3 ಪಕ್ಷಗಳು ಒಗ್ಗೂಡಿ 2.5 ವರ್ಷಗಳಲ್ಲಿ ಒಳ್ಳೆಯ ಕೆಲಸ ಮಾಡಿದೆ ಎಂದು ಸಿಎಂ ಠಾಕ್ರೆ ಹೇಳಿದ್ದಾರೆ. ಎಲ್ಲ ಪಕ್ಷಗಳಿಗೂ ಕೃತಜ್ಞತೆ ಸಲ್ಲಿಸಿದರು. ನಾಳೆ, ವಿಶ್ವಾಸ ಮತ ನಡೆಯುತ್ತದೆ ಮತ್ತು ಅದು ಅಂತ್ಯವೋ ಅಥವಾ ಇಲ್ಲವೋ ಎಂದು ನಿರ್ಧರಿಸಲಾಗುವುದು ಎಂದು ಸಂಪುಟ ಸಭೆಯ ನಂತರ ಎನ್‌ಸಿಪಿ ನಾಯಕ, ಸಚಿವ ಜಯಂತ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಸುಪ್ರೀಂ ಕೋರ್ಟ್ ನಲ್ಲಿ ಏಕನಾಥ್ ಶಿಂಧೆ ಬಣದ ಪರ ಹಾಜರಿದ್ದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್ ವಾದ ಮಂಡಿಸಿ, ತನ್ನ ತೀರ್ಪಿನಲ್ಲಿ ಅನರ್ಹತೆಯ ಪ್ರಕ್ರಿಯೆಯು ವಿಶ್ವಾಸ ಮತ ಪರೀಕ್ಷೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯೊಬ್ಬರು ಹಿಂಜರಿಕೆ ತೋರಿದ ಕ್ಷಣದಲ್ಲಿ ಅವರು ಸದನದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂಬ ಅಭಿಪ್ರಾಯವನ್ನು ಇದು ಪ್ರಾಥಮಿಕವಾಗಿ ನೀಡುತ್ತದೆ ಎಂದು ಸುಪ್ರೀಂ ಹೇಳಿದೆ.
ವಿಶ್ವಾಸಮತ ಪರೀಕ್ಷೆ ರಾಜ್ಯಪಾಲರ ವಿವೇಚನೆಯ ವಿಚಾರವಾಗಿದೆ. ರಾಜ್ಯಪಾಲರ ನಿರ್ಧಾರವನ್ನು ದುರುದ್ದೇಶಪೂರಿತ ಎಂದು ಪರಿಗಣಿಸದ ಹೊರತು ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ವಕೀಲ ನೀರಜ್ ಕಿಶನ್ ಕೌಲ್ ಹೇಳಿದ್ದಾರೆ.
ಬಾಳಾ ಸಾಹೇಬ್ ಸಿದ್ಧಾಂತ ಮುಂದಕ್ಕೆ ಸಾಗಿಸುತ್ತಿದ್ದೇವೆ
ನಾವು ಬಂಡಾಯಗಾರರಲ್ಲ. ನಾವು ಶಿವಸೇನೆ. ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯ ಅಜೆಂಡಾ ಮತ್ತು ಸಿದ್ಧಾಂತವನ್ನು ಮುಂದಕ್ಕೆ ಸಾಗಿಸುತ್ತಿದ್ದೇವೆ. ಹಿಂದುತ್ವ ಸಿದ್ಧಾಂತ ಮತ್ತು ರಾಜ್ಯದ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ಗುವಾಹಟಿ ವಿಮಾನ ನಿಲ್ದಾಣದಲ್ಲಿ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದಾರೆ.
ಮುಂಬೈ ಪೊಲೀಸರ ಎಚ್ಚರಿಕೆ
ಏಕನಾಥ್ ಶಿಂಧೆ ಮತ್ತು ಬಂಡಾಯ ಶಾಸಕರು ಗುರುವಾರ ಮುಂಬೈಗೆ ಆಗಮಿಸಲಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದು, ಎನ್‌ಸಿಪಿ, ಶಿವಸೇನೆ, ಕಾಂಗ್ರೆಸ್, ಬಿಜೆಪಿ, ಎಸ್‌ಪಿ ನಾಯಕರಿಗೆ ನೋಟಿಸ್ ಕಳುಹಿಸಿದ್ದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಬಿಡುಗಡೆ ಮಾಡದಂತೆ ಕೇಳಿಕೊಳ್ಳಲಾಗಿದೆ. ಪರಿಸ್ಥಿತಿ ಹದಗೆಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ನಾಳೆ ನಡೆಯಲಿರುವ ವಿಶ್ವಾಸಮತ ಪರೀಕ್ಷೆಗೆ ಸಹಾಯ ಕೇಳಿದ್ದಾರೆ. ಠಾಕ್ರೆ, ಪಕ್ಷದ ಶಾಸಕ ನಿಮ್ಮ ಪರ ಮತ ಚಲಾಯಿಸುತ್ತಾರೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಂಎನ್‌ಎಸ್ ಏಕೈಕ ಶಾಸಕರನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ
ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ
ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್, ಡಯೆಟ್ಗೆ ಸಹಕಾರಿ
ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ