
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
Team Udayavani, Mar 27, 2023, 8:59 AM IST

ಮಹಾರಾಷ್ಟ್ರ: ನಮ್ಮ ಆರಾಧ್ಯ ದೈವ ಸಾವರ್ಕರ್ ಅವರನ್ನು ಅವಮಾನಿಸಬೇಡಿ, ಅವಮಾನಿಸಿದರೆ ಪರಿಸ್ಥಿತಿ ಸರಿಯಾಗಿರುವುದಿಲ್ಲ ಎಂದು ರಾಹುಲ್ ಗಾಂಧಿ ಅವರಿಗೆ ಶಿವಸೇನೆ( ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ಅವರನ್ನು ಎಲ್ಲರೂ ತಮ್ಮ ಆರಾಧ್ಯ ದೈವ ಎಂದು ಪರಿಗಣಿಸುತ್ತಾರೆ ಮತ್ತು ಅವರನ್ನು ಅವಮಾನಿಸಬೇಡಿ ಎಂದಿದ್ದಾರೆ.
ಅಂಡಮಾನ್ ನ ಸೆಲ್ಯುಲರ್ ಜೈಲಿನಲ್ಲಿ 14 ವರ್ಷಗಳ ಕಾಲ ಊಹಿಸಲಾಗದ ಹಿಂಸೆಯನ್ನು ಸಾವರ್ಕರ್ ಅನುಭವಿಸಿದರು. ಅವರ ನೋವುಗಳನ್ನು ಮಾತ್ರ ಕೇಳಬಹುದು ಅದು ಅವರ ತ್ಯಾಗದ ಪ್ರತೀಕ. ನಾವು ಸಾವರ್ಕರ್ ಅವರಿಗೆ ಆಗುವ ಅವಮಾನವನ್ನು ಸಹಿಸಲಾರೆವು ಎಂದು ಹೇಳಿದರು.
ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಕೀಳಾಗಿ ಕಾಣುವುದನ್ನು ಮುಂದುವರಿಸಿದರೆ ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕುಗಳು ಉಂಟಾಗಬಹುದು ಎಂದು ಹೇಳಿದರು.
ವೀರ ಸಾವರ್ಕರ್ ನಮ್ಮ ದೇವರು. ಅವರಿಗೆ ಅಗೌರವ ತೋರಿಸಿದರೆ ನಾವು ಅದನ್ನು ಸಹಿಸುವುದಿಲ್ಲ. ನಾವು ಹೋರಾಟಕ್ಕೆ ಸಿದ್ದರಿದ್ದೇವೆ. ಆದರೆ ನಮ್ಮ ದೇವರನ್ನು ಅವಮಾನಿಸಿದರೆ ಅದನ್ನು ಮಾತ್ರ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಇತ್ತೀಚೆಗೆ “ನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ, ನಾನು ಎಂದಿಗೂ ಕ್ಷಮೆ ಕೇಳುವುದಿಲ್ಲ” ಎಂದು ಹೇಳಿದ್ದರು. ಈ ಮಾತನ್ನೇ ಉಲ್ಲೇಖಿಸಿ ಉದ್ಧವ್ ಠಾಕ್ರೆ ರಾಹುಲ್ ಅವರಿಗೆ ಸಾವರ್ಕರ್ ಬಗ್ಗೆ ಅಗೌರವ ತೋರಬೇಡಿ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು