29ನ್ನು “ಸರ್ಜಿಕಲ್ ದಾಳಿ ದಿನ’ವನ್ನಾಗಿ ಆಚರಿಸಿ
Team Udayavani, Sep 21, 2018, 6:00 AM IST
ಹೊಸದಿಲ್ಲಿ: ದೇಶದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಿರುವ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ಇದೇ ತಿಂಗಳ 29ನ್ನು, “ಸರ್ಜಿಕಲ್ ಸ್ಟ್ರೈಕ್ ದಿನ’ವನ್ನಾಗಿ ಆಚರಿಸುವಂತೆ ಸೂಚಿಸಿದೆ.
ಭಾರತೀಯ ಸೇನೆಯು 2016ರಲ್ಲಿ ಕೈಗೊಂಡಿದ್ದ ಸರ್ಜಿಕಲ್ ದಾಳಿಯ 2ನೇ ವರ್ಷಾಚರಣೆಯ ಅಂಗವಾಗಿ, ನಿವೃತ್ತ ಸೈನಿಕರು ಹಾಗೂ ವಿದ್ಯಾರ್ಥಿಗಳ ನಡುವೆ ಸಂವಾದ ಕಾರ್ಯಕ್ರಮ, ವಿಶೇಷ ಪರೇಡ್ ನಡೆಸಬೇಕು ಹಾಗೂ ಸೈನಿಕರಿಗೆ ಶುಭಾಶಯದ ಗ್ರೀಟಿಂಗ್ಸ್ ಕಳಿಸಲು ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು ಎಂದಿದೆ. ಅಲ್ಲದೆ, ಸಂಭ್ರಮಾಚರಣೆ ನಿಮಿತ್ತ ಪ್ರತಿ ರಾಜ್ಯಗಳಲ್ಲಿ ಆಯೋಜಿಸಲಾಗುವ ವಿಶೇಷ ಸೇನಾ ವಸ್ತು ಪ್ರದರ್ಶನಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವ್ಯವಸ್ಥೆ ಕೈಗೊಳ್ಳಬೇಕು ಎಂದೂ ಹೇಳಿದೆ. 2016ರ ಸೆ. 29ರಂದು ಭಾರತೀಯ ಸೈನಿಕರು, ಪಾಕ್ ನೆಲೆಯೊಳಗೆ ನುಗ್ಗಿ ಉಗ್ರರ ಅಡಗುದಾಣಗಳನ್ನು ಧ್ವಂಸಗೊಳಿಸಿದ್ದನ್ನು ಸರ್ಜಿಕಲ್ ಸ್ಟೈಕ್ ಎಂದು ಕರೆಯಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್