ಆಧಾರ್‌ ಅನುಮಾನ ಅನಗತ್ಯ

Team Udayavani, May 8, 2017, 9:42 AM IST

Ajay-8-5.jpg

ಹೊಸದಿಲ್ಲಿ: ಆಧಾರ್‌ ಮಾಹಿತಿ ಕದಿಯುವುದು ಅಸಾಧ್ಯ. ಅದು ಅತ್ಯಂತ ಸುರಕ್ಷಿತ ವ್ಯವಸ್ಥೆ. ಇದರ ಬಗ್ಗೆ ಅನುಮಾನ ಅನಗತ್ಯ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ (ಯುಐಧಿಡಿಎಐ)ಸಿಇಒ ಅಜಯ್‌ ಭೂಷಣ್‌ ಪಾಂಡೆ ಹೇಳಿದ್ದಾರೆ. ದೇಶಾದ್ಯಂತ ಆಧಾರ್‌ ಸುರಕ್ಷತೆ ಕುರಿತು ಅನುಮಾನಗಳು ಭುಗಿಲೆದ್ದಿರುವ ನಡುವೆಯೇ ಪಾಂಡೆ  ಅವರು ಈ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಆಧಾರ್‌ ಸುರಕ್ಷತೆ ಮೇಲೆ ಬೆಳಕು ಚೆಲ್ಲಿರುವ ಅವರು, ‘ಆಧಾರ್‌ ನೋಂದಣಿ ಒಂದು ಕಟ್ಟುನಿಟ್ಟಿನ ವ್ಯವಸ್ಥೆ. ಯುಐಡಿಎಐ ನೇಮಿಸಿಕೊಂಡ ತಜ್ಞರು, ಯುಐಡಿಎಐ ಅಭಿವೃದ್ಧಿಪಡಿಸಿದ ಸಾಫ್ಟ್ವೇರ್‌ ಮೂಲಕ ಸಾರ್ವಜನಿಕರ ಆಧಾರ್‌ ಮಾಹಿತಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಹೀಗೆ ನೋಂದಣಿ ಮಾಡಿಕೊಂಡ ಮಾಹಿತಿಯನ್ನು ಯುಡಿಐ ಸರ್ವರ್‌ ಹೊರತು ಬೇರಾರೂ ಓದಲು ಸಾಧ್ಯವಿಲ್ಲ’ ಎಂದಿದ್ದಾರೆ.

ಸಂಖ್ಯೆ ಇದ್ದ ಮಾತ್ರಕ್ಕೆ ಹ್ಯಾಕ್‌ ಮಾಡಲಾಗದು: ‘ಈಗ ನಾವು ನೀಡುವ ಚೆಕ್‌ನಲ್ಲಿ ನಮ್ಮ ಬ್ಯಾಂಕ್‌ ಖಾತೆ ಸಂಖ್ಯೆ ಇರುತ್ತದೆ. ಅಂದ ಮಾತ್ರಕ್ಕೆ ನಮ್ಮಿಂದ ಚೆಕ್‌ ಪಡೆದ ವ್ಯಕ್ತಿ ನಮ್ಮ ಖಾತೆ ಹ್ಯಾಕ್‌ ಮಾಡಲು ಸಾಧ್ಯವೇ? ಇಲ್ಲ. ಹಾಗೆಯೇ ಆಧಾರ್‌ ಸಂಖ್ಯೆ, ಬ್ಯಾಂಕ್‌ ಖಾತೆ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಗಳು ಬಹಿರಂಗಗೊಂಡರೂ ಅವುಗಳಿಗೆ ಪಿನ್‌, ಒಟಿಪಿ ಸುರಕ್ಷತೆ ಇರುವುದರಿಂದ, ಈ ಸಂಖ್ಯೆಗಳನ್ನು ಬಳಸಿ ಹ್ಯಾಕ್‌ ಮಾಡಲಾಗದು’ ಎಂಬುದು ಪಾಂಡೆ ಅವರ ಅಭಿಪ್ರಾಯ.

ನಕಲಿ ಐಡಿ ಅಸಾಧ್ಯ: ‘ಒಮ್ಮೆ ರಾಜು ಎಂಬ ಹೆಸರಿನಲ್ಲಿ ಆಧಾರ್‌ ನೋಂದಣಿ ಮಾಡಿಕೊಂಡ ವ್ಯಕ್ತಿ, ಇನ್ನೊಮ್ಮೆ ಬೇರೆ ಗುರುತಿನ ಚೀಟಿ ನೀಡಿ, ಬೇರೊಂದು ಹೆಸರಿನಲ್ಲಿ ನೋಂದಣಿ ಮಾಡಿಧಿಕೊಳ್ಳಲು ಮುಂದಾದರೆ ಬಯೋಮೆಟ್ರಿಕ್‌ ವಿವರಗಳನ್ನು ನೀಡುವಾಗ ಸಿಕ್ಕಿಬೀಳುತ್ತಾನೆ. ಈ ಮೊದಲೇ ಆತನ ಬಯೋಮೆಟ್ರಿಕ್‌ ಮಾಹಿತಿ ಬೇರೊಂದು ಸಂಖ್ಯೆಯಲ್ಲಿ ನಮೂದಾಗಿರುವ ಕಾರಣ ನೋಂದಣಿ ರದ್ದಾಗುತ್ತದೆ. ಇಂಥವರಿಗೆ ಶಿಕ್ಷೆ ಖಂಡಿತ’ ಎನ್ನುತ್ತಾರೆ ಯುಐಡಿಎಐ ಸಿಇಒ.

ಅದೊಂದೇ ಅಂತಿಮ ಆಗಕೂಡದು 
ನಕಲಿ ಆಧಾರ್‌ ಸಂಖ್ಯೆ, ಕಾರ್ಡ್‌ ಬಳಸಿ ಬ್ಯಾಂಕ್‌ನವರಿಗೆ ಮೋಸ ಮಾಡುವ ಸಾಧ್ಯತೆಗಳನ್ನು ಅಲ್ಲಗಳೆಯಲಾಗದು. ಆದರೆ ಬ್ಯಾಂಕ್‌ ಖಾತೆ ತೆರೆಯುವಾಗ ಆಧಾರ್‌ ಸಂಖ್ಯೆಯೊಂದೇ ಅಂತಿಮ ದಾಖಲೆ ಆಗಬಾರದು. ಬ್ಯಾಂಕ್‌ನವರು ಆಧಾರ್‌ ಹೊರತಾಗಿ, ವ್ಯಕ್ತಿಯ ಮತದಾನ ಗುರುತಿನ ಚೀಟಿ, ಪಡಿತರ ಚೀಟಿ ಸೇರಿ ಬೇರಾವುದೇ ದಾಖಲೆ ಪಡೆದು ಪರಿಶೀಲಿಸಬಹುದು. ಹೀಗೆ ಮಾಡುವುದರಿಂದ ಹಣದ ಅಕ್ರಮ ವ್ಯವಹಾರಗಳನ್ನು ತಡೆಯಬಹುದು.ಸರಕಾರದ ಸಹಾಯಧನ ಮತ್ತಿತರ ಪ್ರಯೋಜನ ಪಡೆಯಲು ಆಧಾರ್‌ ಅಗತ್ಯ. ಆದರೆ ಕಡ್ಡಾಯವಲ್ಲ. ಆಧಾರ್‌ ಹೊಂದಿರದ ವ್ಯಕ್ತಿ, ಬೇರಾವುದೇ ಗುರುತಿನ ದಾಖಲೆ ನೀಡಲು ಆಧಾರ್‌ ಕಾಯ್ದೆಯ ವಿಭಾಗ 7 ಅವಕಾಶ ಕಲ್ಪಿಸುತ್ತದೆ. ಆದರೆ, ಇದೇ ವೇಳೆ ಆತ ಆಧಾರ್‌ ಸಂಖ್ಯೆಗೆ ನೋಂದಣಿಯಾಗಬೇಕಾಗುತ್ತದೆ’ ಎಂದೂ ಅಜಯ್‌ ಭೂಷಣ್‌ ಪಾಂಡೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.