ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು
Team Udayavani, Dec 26, 2022, 2:06 PM IST
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿ ತಿಳಿಸಿದೆ.
ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಖಾಸಗಿ ವಾರ್ಡ್ ನಲ್ಲಿ ಚಿಕಿತ್ಸೆ ಪಡೆದು, ಕೆಲ ಸಮಯದಿಂದ ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.