ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Team Udayavani, May 9, 2021, 7:27 PM IST
ಬಾಲಸೋರೆ : ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಭಾನುವಾರ ಒಡಿಶಾದ ಬಾಲಸೋರೆ ಜಿಲ್ಲೆಯ ನೀಲಗಿರಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್ ಸಚಿವರ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರತಾಪ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಕುರಿತು ತಮ್ಮ ಟ್ವಿಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಇತ್ತೀಚಿಗಷ್ಟೆ ಮೃತಪಟ್ಟ ನನ್ನ ಕ್ಷೇತ್ರದ ನಿವಾಸಿಯ ಕುಟುಂಬಕ್ಕೆ ಸಾಂತ್ವಾನ ಹೇಳಲು ಹೊರಟಿದ್ದೆ. ಈ ವೇಳೆ ನೀಲಗಿರಿ ಪ್ರದೇಶದ ಸಮೀಪ ಪುಡಸಲ್ ಎಂಬಲ್ಲಿ ಟ್ರ್ಯಾಕ್ಟರ್ ನಮ್ಮ ಕಾರಿಗೆ ಢಿಕ್ಕಿ ಹೊಡೆಯಿತು. ದೇವರ ದಯೆ ಹಾಗೂ ನನ್ನ ಜನರ ಆಶೀರ್ವಾದದ ಫಲವಾಗಿ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೂಗಿಗೆ ಸ್ವಲ್ಪ ಗಾಯವಾಗಿದ್ದನ್ನು ಬಿಟ್ಟರೆ ನಾನು ಅರಾಮ್ ಆಗಿದ್ದೇನೆ. ನನ್ನ ಪಿಎ ಹಾಗೂ ಕಾರು ಡ್ರೈವರ್ ಕೂಡ ಅರಾಮ್ ಇದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಇನ್ನು ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು, ಸಚಿವರನ್ನು ನಿಲಿಗಿರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದರು. ಹಾಗೂ ಅಪಘಾತ ಮಾಡಿರುವ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿದ್ದಾರೆ.
Odisha: Union Minister Pratap Sarangi sustained injuries after his car was hit by a tractor near Podasuli in Balasore district earlier today. pic.twitter.com/cSEi49wwab
— ANI (@ANI) May 9, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್