ಮುಂದಿನ ತಿಂಗಳು ಭಾರತಕ್ಕೆ ಟ್ರಂಪ್ ಭೇಟಿ?
Team Udayavani, Jan 15, 2020, 1:28 AM IST
ಹೊಸದಿಲ್ಲಿ: ಫೆಬ್ರವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಸಂಭವವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ಇಬ್ಬರಿಗೂ ಅನುಕೂಲವಾಗುವಂಥ ದಿನ ಪ್ರವಾಸ ನಿಗದಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ವೇಳೆ ಟ್ರಂಪ್ ನಾಗರಿಕ ವಿಮಾನಯಾನದ ಒಪ್ಪಂದವೊಂದಕ್ಕೆ ಸಹಿ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.