ಉ.ಪ್ರ. ಸಿಎಂ ಯೋಗಿಯನ್ನು ಹಾಡಿ ಹೊಗಳಿದ ಅಮಿತ್‌ ಶಾ

Team Udayavani, Jul 29, 2019, 7:38 AM IST

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2017ರಲ್ಲಿ ನೇಮಕವಾದಾಗ ಯೋಗಿ ಆದಿತ್ಯನಾಥ್‌ ಅವರಿಗೆ ಯಾವುದೇ ಆಡಳಿತದ ಅನುಭವವಿರಲಿಲ್ಲ. ಆದರೆ, ಮುಂದಿನ ದಿನಗಳಲ್ಲಿ ದಕ್ಷ ಆಡಳಿತ ನೀಡುವ ಮೂಲಕ ಅವರು ಬಿಜೆಪಿಯ ಆಯ್ಕೆಗೆ ಸೂಕ್ತ ಸಮರ್ಥನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶ್ಲಾ ಸಿದ್ದಾರೆ.

ಲಕ್ನೋದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, “”ಮುಖ್ಯಮಂತ್ರಿಯಾಗುವ ಮುನ್ನ ಯೋಗಿ ಒಂದು ಸ್ಥಳೀಯ ಸರಕಾರವನ್ನೂ ನಡೆಸಿದವರಲ್ಲ. ಹಾಗಾಗಿಯೇ, ಅವರನ್ನು ಮುಖ್ಯಮಂತ್ರಿ ಗಾದಿಗೆ ಕೂರಿಸಿದಾಗ ಹಲವಾರು ಮಂದಿ ನನಗೆ ಫೋನ್‌ ಮಾಡಿ ನಿಮ್ಮ ಆಯ್ಕೆ ಸರಿಯಲ್ಲ ಎಂದರು. ಆದರೆ, ಯೋಗಿಯವರು ನಮ್ಮ ಆಯ್ಕೆಯನ್ನು ಹುಸಿಗೊಳಿಸಲಿಲ್ಲ. ತಮ್ಮ ಸಮರ್ಪಣಾ ಭಾವದಿಂದ, ಕಠಿಣ ಪರಿಶ್ರಮದ ದುಡಿಯುವ ಮೂಲಕ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಯಶಸ್ವಿಯಾಗಿ ಕೊಂಡೊಯ್ಯುತ್ತಿದ್ದಾರೆ.

ಭಾರತದ 5 ಲಕ್ಷ ಕೋಟಿ ಡಾಲರ್‌ ಆರ್ಥಿಕತೆ ಗುರಿಗೆ ಉತ್ತರ ಪ್ರದೇಶ ಗಣನೀಯ ಕಾಣಿಕೆ ನೀಡುತ್ತದೆ” ಎಂದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ತುಮಕೂರು: ಇಂದಿನ ಜಾತಿ ವ್ಯವಸ್ಥೆ ಭಾರತವನ್ನು ದುರ್ಬಲವನ್ನಾಗಿಸುತ್ತಿದೆ. ಈ ವ್ಯವಸ್ಥೆಯ ವಿರುದ್ಧ ಅಂದು ಬಸವಣ್ಣನವರು ಸಾಮಾಜಿಕ ಆಂದೋಲನವನ್ನೇ ಮಾಡಿದರು. ಇಂದು...

  • ಜಾಗತಿಕ ಮಟ್ಟದಲ್ಲಿ ಜನ ಸಾರಿಗೆ ಸೇವೆಗೆ ಮಾಡುವ ವೆಚ್ಚಕ್ಕೆ ಹೋಲಿಸಿದರೆ ಬೆಂಗಳೂರಿಗರು ದುಪ್ಪಟ್ಟು ಹಣ ತೆರುತ್ತಿದ್ದಾರೆ ಎಂದು ಸೆಂಟರ್‌ ಫಾರ್‌ ಸೈನ್ಸ್‌ ಆಂಡ್‌...

  • ಬೆಂಗಳೂರು: "ಪಕ್ಷದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಿ'! ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ದಿನೇಶ್‌ ಗುಂಡೂರಾವ್‌ ಅವರಿಗೆ...

  • ಬೆಂಗಳೂರು: ಕಪ್‌ ಗಳಿಸಿ, ಕಸ ಅಳಿಸಿ!, ಕಸದ ಪ್ರಮಾಣ ಕಡಿಮೆ ಮಾಡಿ, ರನ್‌ ರೇಟ್‌ ಅಲ್ಲ, ಕಸ ಇಲ್ಲದಿರುವ ಸಿಟಿ ಸೂಪರ್‌ ಸಿಟಿ! ಇವು ಭಾನುವಾರ ಬಿಬಿಎಂಪಿಯ ವೆಬ್‌ಸೈಟ್‌...

  • ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 58,10,493 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ. 91.16 ರಷ್ಟು ಗುರಿ ಸಾಧನೆಯಾಗಿದೆ....