10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ನೊಂದ ಬಾಲಕಿ ಆತ್ಮಹತ್ಯೆ!
Team Udayavani, Apr 3, 2021, 1:15 PM IST
ಉತ್ತರ ಪ್ರದೇಶ : ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದು, ನೊಂದ ವಿದ್ಯಾರ್ಥಿನಿಯು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ನಾಲ್ಕು ಮಂದಿ ಯುವಕರು ಅಪ್ರಾಪ್ತೆಯನ್ನು ಅಪಹರಿಸಿ ನಂತರ ಅತ್ಯಾಚಾರ ಮಾಡಿದ್ದಾರೆ, ಇದರಿಂದ ನೊಂದ ವಿದ್ಯಾರ್ಥಿನಿಯು ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಲೆಯಿಂದ ಮನೆಗೆ ಬರುವ ವೇಳೆ ನಾಲ್ಕು ಮಂದಿ ಅಡ್ಡಗಟ್ಟಿ ಆಕೆಯನ್ನು ಅಪಹರಿಸಿದ್ದಾರೆ. ಸಾಯುವ ಮುನ್ನ ವಿದ್ಯಾರ್ಥಿನಿಯು ಡೆತ್ ನೋಟ್ ಬರೆದಿದ್ದು, ಇಬ್ಬರು ಆರೋಪಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾಳೆ. ಡೆತ್ ನೋಟ್ ಆಧಾರದ ಮೇಲೆ ವಿದ್ಯಾರ್ಥಿನಿಯ ಪಕ್ಕದೂರಿನ ಲಖನ್ ಮತ್ತು ವಿಕಾಸ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಇಬ್ಬರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.
ಶಾಲೆಯಿಂದ ಬಂದ ನಂತ್ರ ನಡೆದ ಘಟನೆಯನ್ನು ಪೋಷಕರ ಬಳಿ ಹೇಳಿದ್ದಾಳೆ. ಇದಾದ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ತಮ್ಮ ಮಗಳನ್ನು ಆಸ್ಪತ್ರೆಗೆ ಕರೆದೊಯ್ದರೂ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ