ಉತ್ತರ ಪ್ರದೇಶ: ಕಳ್ಳತನವಾಗಿದ್ದ ಮಗು ಬಿಜೆಪಿ ನಾಯಕಿ ಮನೆಯಲ್ಲಿ ಪತ್ತೆ!
Team Udayavani, Aug 29, 2022, 8:18 PM IST
ಲಕ್ನೋ: ಉತ್ತರ ಪ್ರದೇಶದ ಮಥುರಾ ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ದಂಪತಿಯಿಂದ ವ್ಯಕ್ತಿಯೊಬ್ಬ ಮಗುವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ವಿಡಿಯೋ ವೈರಲ್ ಆಗಿತ್ತು.
ಇದೀಗ ಆ ಮಗು ಬಿಜೆಪಿ ನಾಯಕಿಯೊಬ್ಬರ ಮನೆಯಲ್ಲಿ ಪತ್ತೆಯಾಗಿದೆ!
ಕಳ್ಳತನವಾದ ಸ್ಥಳದಿಂದ ಸುಮಾರು 100ಕಿ.ಮೀ. ದೂರದಲ್ಲಿ ವಾಸವಿರುವ ಫಿರೋಜಾಬಾದ್ನ ಕಾರ್ಪೋರೇಟರ್ ವಿನಿತಾ ಅಗರ್ವಾಲ್ ಅವರಿಗೆ ಹೆಣ್ಣು ಮಗುವಿದೆ. ಆದರೆ ಗಂಡು ಮಗುವೊಂದು ಬೇಕು ಎನ್ನುವ ಕಾರಣಕ್ಕೆ ಅವರು ಹತ್ರಾಸ್ ಜಿಲ್ಲೆಯ ಆಸ್ಪತ್ರೆಯೊಂದರ ವೈದ್ಯರಿಬ್ಬರಿಗೆ ಅಕ್ರಮವಾಗಿ 1.8 ಲಕ್ಷ ರೂ. ಕೊಟ್ಟಿದ್ದಾರೆ. ಆ ಹಣಕ್ಕೆ ಆ ವೈದ್ಯರು ಕದ್ದ ಮಗುವನ್ನು ದಂಪತಿಗೆ ಹಸ್ತಾಂತರಿಸಿದ್ದಾರೆ.
ಈ ಪ್ರಕರಣದಿಂದಾಗಿ ಮಕ್ಕಳನ್ನು ಕದ್ದು, ಮಾರಾಟ ಮಾಡುತ್ತಿದ್ದ ದೊಡ್ಡ ಗ್ಯಾಂಗ್ ಒಂದು ಸಿಕ್ಕಿಬಿದ್ದಿದೆ. ಮಗುವನ್ನು ಕದ್ದಿದ್ದ ದೀಪ ಕುಮಾರ್, ಇಬ್ಬರು ವೈದ್ಯರು ಸೇರಿ 8 ಮಂದಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ