ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬೇಡಿಕೆ: ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿದ ಪತ್ನಿ.!
ಆಸ್ಪತ್ರೆಯಲ್ಲಿ ಪತಿ ಗಂಭೀರ
Team Udayavani, Jan 29, 2024, 4:16 PM IST
ಲಕ್ನೋ: ಪತ್ನಿಯೊಬ್ಬಳು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬೇಡಿಕೆಯನ್ನಿಟ್ಟದ್ದಕ್ಕೆ ಸಿಟ್ಟಿನಲ್ಲಿ ಪತಿಯ ಖಾಸಗಿ ಅಂಗವನ್ನೇ ಕಚ್ಚಿ ಗಾಯಗೊಳಿಸಿರುವ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಘಟನೆಯ ನಂತರ 34 ವರ್ಷದ ಪತಿ ರಾಮು ನಿಶಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಭಾನುವಾರ (ಜನವರಿ 28) ಪತಿ ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪತ್ನಿ ಒಪ್ಪದಿದ್ದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ಜಗಳ ಉಂಟಾಗಿದೆ.
ಇದರಿಂದ ಕೋಪಗೊಂಡ ಪತ್ನಿ ಪತಿಯ ಖಾಸಗಿ ಅಂಗಕ್ಕೆ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ್ದಾರೆ. ಖಾಸಗಿ ಅಂಗದಿಂದ ರಕ್ತ ಬಂದಿದ್ದು,ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಗಂಭೀರ ಪರಿಸ್ಥಿತಿಯಿಂದ ಅವರನ್ನು ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಅಸ್ವಾಭಾವಿಕ ಲೈಂಗಿಕತೆʼಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡಿರುವುದಾಗಿ ಪತ್ನಿ ಆರೋಪಿಸಿದ್ದಾರೆ.
ಪತ್ನಿ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 326 ರ ಅಡಿಯಲ್ಲಿ ಸ್ವಯಂಪ್ರೇರಣೆಯಿಂದ ತೀವ್ರವಾದ ಗಾಯವನ್ನು ಉಂಟುಮಾಡಿದ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಸೆಕ್ಷನ್ 506 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಸದ್ಯ ತನಿಖೆ ಆರಂಭಿಸಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅನೂಪ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ