ಸಂತಾನೋತ್ಪತ್ತಿ ತಂತ್ರಜ್ಞಾನ ಗರಿಷ್ಠ ವಯೋಮಿತಿ ಪರಿಶೀಲಿಸಿ: ಕೇರಳ ಹೈಕೋರ್ಟ್
Team Udayavani, Jan 5, 2023, 7:40 AM IST
ಕೊಚ್ಚಿ: ಮಗುವನ್ನು ಹೊಂದುವ ಮೂಲಕ ಕುಟುಂಬವನ್ನು ವಿಸ್ತರಿಸುವ ವೈಯಕ್ತಿಕ ಆಯ್ಕೆಯು ಮೂಲಭೂತ ಹಕ್ಕಾಗಿದೆ ಮತ್ತು ಇದಕ್ಕಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು ನಿಗದಿಪಡಿಸುವುದು ನಿರ್ಬಂಧವಾಗಿದ್ದು, ಈ ಕುರಿತು ಪುನರ್ಅವಲೋಕನದ ಅಗತ್ಯವಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಸಂತಾನೋತ್ಪತ್ತಿ ತಂತ್ರಜ್ಞಾನ ಮೂಲಕ ಮಗು ಹೊಂದಲು ಸೂಚಿಸಲಾದ ಗರಿಷ್ಠ ವಯಸ್ಸಿನ ಮಿತಿಯನ್ನು ಮರುಪರಿಶೀಲಿಸುವ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನಸೆಳೆಯುವಂತೆ ರಾಷ್ಟ್ರೀಯ ಸಹಾಯಕ ಸಂತಾನೋತ್ಪತ್ತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ ಮಂಡಳಿ (ಎನ್ಎಆರ್ಟಿಎಸ್ಬಿ)ಗೆ ಹೈಕೋರ್ಟ್ ನಿರ್ದೇಶಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ವಿ.ಜಿ.ಅರುಣ್ ಅವರಿದ್ದ ನ್ಯಾಯಪೀಠ, ನಿಬಂಧನೆ ಬದಲಾವಣೆಗೆ ಅವಕಾಶವಿಲ್ಲದೆ ಗರಿಷ್ಠ ವಯಸ್ಸಿನ ನಿರ್ಬಂಧ ವಿಧಿಸುವುದು ತರ್ಕಬಾಹಿರ ಮತ್ತು ಅನಿಯಂತ್ರಿತ ಎಂದು ಹೇಳಿದೆ.
2021ರ ತಂತ್ರಜ್ಞಾನ ಆಧಾರಿತ ಸಂತಾನೋತ್ಪತ್ತಿ (ನಿಯಂತ್ರಣ) ಕಾಯ್ದೆಯ ಅನುಸಾರ ಸಂತಾನೋತ್ಪತ್ತಿ ತಂತ್ರಜ್ಞಾನದ ಮೊರೆ ಹೋಗಲು ಮಹಿಳೆಯರಿಗೆ ಗರಿಷ್ಠ ವಯಸ್ಸು 50 ವರ್ಷ ಹಾಗೂ ಪುರುಷರಿಗೆ 55 ವರ್ಷ ನಿಗದಿಪಡಿಸಲಾಗಿದೆ. ಇದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ