ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದ ರಾಹುಲ್ ಹೇಳಿಕೆ; ಕಲಾಪದಲ್ಲಿ ಹೊಯ್, ಕೈ!

ಸಂಸದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟಾಗೋರ್ ತಿಳಿಸಿದರು.

Team Udayavani, Feb 7, 2020, 6:16 PM IST

Lokasabe

ನವದೆಹಲಿ: ಲೋಕಸಭಾ ಕಲಾಪದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಸಂಸದರು ಕೈ-ಕೈ ಮಿಲಾಯಿಸಿದ ಘಟನೆ ಶುಕ್ರವಾರ ನಡೆದಿದ್ದು, ಸುಗಮ ಕಲಾಪಕ್ಕೆ ತೀವ್ರ ಅಡ್ಡಿಯಾಗಿರುವುದಾಗಿ ವರದಿ ತಿಳಿಸಿದೆ.

ಕಲಾಪದಲ್ಲಿ ವಾಕ್ಸಮರ, ಕೈ, ಕೈ ಮಿಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಸಲ್ಲಿಸಿರುವುದಾಗಿ ವರದಿ ಹೇಳಿದೆ.

ಏನಿದು ಕೋಲಾಹಲ, ಗದ್ದಲ:

ಲೋಕಸಭೆ ಕಲಾಪದ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಮುಖಂಡ ಮೆಡಿಕಲ್ ಕಾಲೇಜುಗಳಿಗೆ ಸಂಬಂಧಿಸಿದ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಉತ್ತರ ನೀಡುವ ವೇಳೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದ್ದರು.

“ದೇಶದ ಯುವ ಜನತೆ ನಿರುದ್ಯೋಗದಿಂದ ರೋಸಿ ಹೋಗಿ ನರೇಂದ್ರ ಮೋದಿ ಅವರನ್ನು ದೊಣ್ಣೆಯಿಂದ ಹೊಡೆಯಲಿದ್ದಾರೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ಹೇಳಿಕೆ ನೀಡಿದ್ದರು ಎಂದು ವರದಿ ತಿಳಿಸಿದೆ.

ಸ್ಪೀಕರ್ ಅವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ ದಯವಿಟ್ಟು ನಾನು ಪ್ರಶ್ನೆಗೆ ಉತ್ತರ ಕೊಡುವ ಮೊದಲು ನಮ್ಮ ರಾಹುಲ್ ಗಾಂಧೀಜಿ ಅವರು, ದೇಶದ ಪ್ರಧಾನ ಮಂತ್ರಿ ಅವರ ವಿರುದ್ಧ ಬಳಸಿರುವ ಪದ ಹಾಗೂ ಹೇಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ್ದರು. ಏತನ್ಮಧ್ಯೆ ಸ್ಪೀಕರ್ ಬಿರ್ಲಾ ಅವರು, ಉತ್ತರ ಮಾತ್ರ ನೀಡಿ ಎಂದು ಸೂಚನೆ ನೀಡಿದ್ದರು.

ನಂತರವೂ ಆರೋಗ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಖಂಡಿಸುವ ಪ್ರಕಟಣೆ ಓದುವುದನ್ನು ಮುಂದುವರಿಸಿದಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು. ತೀವ್ರ ಕೋಲಾಹಲ, ಗದ್ದಲ ಏರ್ಪಟ್ಟಾಗ ಸ್ಪೀಕರ್ ಅವರು ಕಲಾಪವನ್ನು ಮುಂದೂಡಿದ್ದರು.

ಸದನದ ಬಾವಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಬಿಜೆಪಿ ಸಂಸದರು ಕೈ, ಕೈ ಮಿಲಾಯಿಸಿ, ಒಬ್ಬರು ಸಂಸದರು ಕೊಲ್ಲುವುದಾಗಿ ಬೆದರಿಯೊಡ್ಡಿರುವುದಾಗಿ ಕಾಂಗ್ರೆಸ್ ಸಂಸದರು ದೂರಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರು ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಿ ತಕ್ಷಣವೇ ಯಾರು ಕೈ, ಕೈ ಮಿಲಾಯಿಸಿದ್ದಾರೋ ಆ ಸಂಸದರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟಾಗೋರ್ ತಿಳಿಸಿದರು.

ನಂತರ ಉತ್ತರ ಪ್ರದೇಶ ಬಿಜೆಪಿ ಸಂಸದ ಬ್ರಿಜಿಭೂಷಣ್ ಸಿಂಗ್ ಅವರು ಕಾಂಗ್ರೆಸ್ ಸಂಸದ ಮಾಣಿಕಂ ವಿರುದ್ಧ ದೂರು ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.

ಟಾಪ್ ನ್ಯೂಸ್

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

shivaraj-kumar

ಪುನೀತ್ ಡ್ರೀಮ್ ಪ್ರಾಜೆಕ್ಟ್ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ ನೀಡಿದ ಶಿವಣ್ಣ

1-ff

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಪಾಲ ಕೆ. ರೋಸಯ್ಯ ವಿಧಿವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

1-ff

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಪಾಲ ಕೆ. ರೋಸಯ್ಯ ವಿಧಿವಶ

ಮದುರೈ: ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಟೆಲ್, ಮಾಲ್ ಗೆ ಪ್ರವೇಶಕ್ಕೆ ನಿರ್ಬಂಧ

ಮದುರೈ: ಕೋವಿಡ್ ಲಸಿಕೆ ಹಾಕಿಸಿಕೊಳ್ಳದವರಿಗೆ ಹೋಟೆಲ್, ಮಾಲ್ ಗೆ ಪ್ರವೇಶಕ್ಕೆ ನಿರ್ಬಂಧ

1-raod

ಉದ್ಘಾಟನೆಗೆ ತೆಂಗಿನಕಾಯಿ ಒಡೆದಾಗ ಬಿರುಕು ಬಿಟ್ಟ ಹೊಸ ರಸ್ತೆ !

ಭಾರತದಲ್ಲಿ 8,603 ಕೋವಿಡ್ ಪ್ರಕರಣ ಪತ್ತೆ: ಶೇ.98ರಷ್ಟು ಚೇತರಿಕೆ ಪ್ರಮಾಣ

ಭಾರತದಲ್ಲಿ 8,603 ಕೋವಿಡ್ ಪ್ರಕರಣ ಪತ್ತೆ: ಶೇ.98ರಷ್ಟು ಚೇತರಿಕೆ ಪ್ರಮಾಣ

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.