ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗದಂತೆ ಪ್ರವಾಸಿಗರಿಗೆ ಅಮೇರಿಕಾ ಸೂಚನೆ
Team Udayavani, Mar 9, 2019, 4:32 AM IST
ಹೊಸದೆಹಲಿ: ಕಾಶ್ಮೀರ ಪ್ರವಾಸಿಗರ ಸ್ವರ್ಗ. ವಿದೇಶಿಯರಂತೂ ಒಮ್ಮೆಯಾದರೂ ಕಾಶ್ಮೀರದ ಸೌಂದರ್ಯ ಸವಿಯಬೇಕೆಂದು ಅಲ್ಲಿಗೆ ಭೇಟಿ ನೀಡುತ್ತಾರೆ. ಆದರೆ ಅಮೇರಿಕಾ ಈಗ ತನ್ನ ದೇಶದ ಪ್ರವಾಸಿಗರಿಗೆ ಕಾಶ್ಮೀರಕ್ಕೆ ಹೋಗದಂತೆ ಸೂಚನೆ ನೀಡಿದೆ.
ಭಾರತ ಮತ್ತು ಪಾಕಿಸ್ಥಾನದ ನಡುವೆ ಕಳೆದ ಒಂದು ತಿಂಗಳಿಂದ ವಿಷಮ ಸ್ಥಿತಿ ಇರುವುದರಿಂದ ಅಮೇರಿಕಾ ತನ್ನ ಪ್ರಜೆಗಳಿಗೆ ಈ ಸೂಚನೆ ನೀಡಿದೆ. ಪೂರ್ವ ಲಡಾಖ್ ಮತ್ತು ಲೇಹ್ ಹೊರತು ಪಡಿಸಿ ಜಮ್ಮು ಕಾಶ್ಮೀರದ ಯಾವುದೇ ಸ್ಥಳಕ್ಕೆ ಭೇಟಿ ನೀಡಬಾರದು ಎಂದು ಅಮೇರಿಕಾ ಸೂಚನೆ ನೀಡಿದೆ.
ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇದಾದ 12 ದಿನಗಳ ಬಳಿಕ ಭಾರತ ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದನಾ ಕ್ಯಾಂಪ್ ಮೇಲೆ ದಾಳಿ ಮಾಡಿತ್ತು. ಇದಾದ ನಂತರ ಕಾಶ್ಮೀರದ ಅಲ್ಲಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಹೀಗಾಗಿ ತನ್ನ ಪ್ರಜೆಗಳ ರಕ್ಷಣೆಯ ಕಾರಣಕ್ಕಾಗಿ ಕಾಶ್ಮೀರಕ್ಕೆ ಭೇಟಿ ನೀಡದಂತೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ