Fake visa; ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಗೆ 2 ವರ್ಷ ಜೈಲು ಶಿಕ್ಷೆ
Team Udayavani, Dec 9, 2023, 3:33 PM IST
ಮಹಾರಾಜಗಂಜ್(ಉತ್ತರಪ್ರದೇಶ) : ನಕಲಿ ವೀಸಾ ದಾಖಲೆಗಳ ಮೂಲಕ ಭಾರತ ಪ್ರವೇಶಿಸಲು ಯತ್ನಿಸಿದ ಅಮೆರಿಕ ಪ್ರಜೆಯೊಬ್ಬನಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಎರಿಕ್ ಡೇನಿಯಲ್ ಬೆಕ್ವಿತ್ (36) ಎಂಬಾತನಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸೌರಭ್ ಶ್ರೀವಾಸ್ತವ ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 15 ದಿನ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಹೇಳಿದೆ. 20,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ ಎಂದು ಎಎಸ್ಪಿ ಅತೀಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಅಮೆರಿಕ ಪ್ರಜೆಯು ನೇಪಾಳದಿಂದ ಭಾರತಕ್ಕೆ ಬರುತ್ತಿದ್ದ. ಭಾರತ-ನೇಪಾಳ ಗಡಿಯ ಸೊನೌಲಿ ಪ್ರದೇಶದಲ್ಲಿ ವಲಸೆ ಇಲಾಖೆ ದಾಖಲೆಗಳನ್ನು ಪರಿಶೀಲಿಸಿ ತನಿಖೆಯ ನಡೆಸಿದ ನಂತರ, ಆತನ ವೀಸಾ ದಾಖಲೆಗಳು ನಕಲಿ ಎಂದು ಕಂಡುಬಂದಿದೆ. ಮಾರ್ಚ್ 29 ರಂದು ಆತನನ್ನು ಬಂಧಿಸಿ ಐಪಿಸಿಯ ಸಂಬಂಧಿತ ಸೆಕ್ಷನ್ಗಳು ಮತ್ತು ವಿದೇಶಿ ಕಾಯ್ದೆಯ ಸೆಕ್ಷನ್ 14 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ಹೇಳಿದರು.
ನಿಯಮಾನುಸಾರ ಸಂಬಂಧಪಟ್ಟ ರಾಯಭಾರಿ ಕಚೇರಿ ಮತ್ತು ಗುಪ್ತಚರ ಸಂಸ್ಥೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ಎಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್