ಉಸ್ತಾದ್ ಬಿಸ್ಮಿಲ್ಲಾ ಖಾನ್ ಪುತ್ರ ಜಮೀನ್ ಖಾನ್ ನಿಧನ
Team Udayavani, Feb 10, 2018, 3:10 PM IST
ವಾರಾಣಸಿ, ಉತ್ತರ ಪ್ರದೇಶ : ಶೆಹನಾಯ್ ಮಾಂತ್ರಿಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಮೂರನೇ ಪುತ್ರ ಜಮೀನ್ ಹುಸೇನ್ ಖಾನ್ ಅವರಿಂದು ನಿಧನಹೊಂದಿದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಜಮೀನ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಇಂದು ನಸುಕಿನ ವೇಳೆ ಅವರು ನಗರದ ಕಾಳೀ ಮಹಲ್ ಪ್ರದೇಶದಲ್ಲಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ಅವರು ಐವರು ಪುತ್ರಿಯರು, ಒಬ್ಬ ಪುತ್ರ ಅಫಕ್ ಹೈದರ್ ಅವರನ್ನು ಅಗಲಿದ್ದಾರೆ. ಈಗಿನ್ನು ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಶೆಹನಾಯ್ ಬಳುವಳಿಯನ್ನು ಮುಂದುವರಿಸಿಕೊಂಡು ಹೋಗುವ ಹೊಣೆಗಾರಿಕೆ ಅಫಕ್ ಹೈದರ್ ಅವರ ಹೆಗಲಿಗೆ ಬಿದ್ದಿದೆ.
ಜಮೀನ್ ಅವರ ಪಾರ್ಥಿವ ಶರೀರವನ್ನು ಫತ್ಮಾನ್ ದರ್ಗಾದಲ್ಲಿನ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಗೋರಿಯ ಸಮೀಪವೇ ದಫನ ಮಾಡಲಾಗುವುದು ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್