ನೂಪುರ್ ಶರ್ಮಾ ಹತ್ಯೆ ಮಾಡಲು ಪಾಕ್ ಉಗ್ರ ಸಂಘಟನೆ ನಿಯೋಜಿಸಿದ್ದ ಉಗ್ರ ಬಂಧನ
Team Udayavani, Aug 12, 2022, 10:30 PM IST
ಲಕ್ನೋ: ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡಲು ನಿಯೋಜಿತನಾಗಿದ್ದ ಉಗ್ರನನ್ನು ಬಂಧಿಸಲಾಗಿದೆ.
ಆತನನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ನ ಮೊಹಮ್ಮದ್ ನದೀಮ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಗಂಗೋಹ್ ಎಂಬ ಗ್ರಾಮದಲ್ಲಿ ಆತ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಆತನನ್ನು ಸಮಗ್ರವಾಗಿ ವಿಚಾರಣೆ ನಡೆಸಿದ ವೇಳೆ, ತನಗೆ ನೂಪುರ್ ಶರ್ಮಾ ಅವರನ್ನು ಕೊಲ್ಲುವ ಕೆಲಸ ವಹಿಸಲಾಗಿತ್ತು. ನೆರೆಯ ರಾಷ್ಟ್ರದಲ್ಲಿ ಈ ಉದ್ದೇಶಕ್ಕಾಗಿ ತನಗೆ ಶಸ್ತ್ರಾಸ್ತ್ರ ತರಬೇತಿ ನೀಡಲು ಉದ್ದೇಶಿಸಲಾಗಿತ್ತು. ಆ ಹಿನ್ನೆಲೆಯಲ್ಲಿ ಶೀಘ್ರವೇ ಪಾಕಿಸ್ತಾನಕ್ಕೆ ತೆರಳುವವನಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆತನ ಫೋನ್ ಸಂಭಾಷಣೆ ವೇಳೆ, ಸುಧಾರಿತ ಸ್ಫೋಟಕಗಳನ್ನು ತಯಾರಿಸುವ ವಿವರಗಳನ್ನು ಪಡೆದುಕೊಂಡದ್ದು ಖಚಿತವಾಗಿದೆ. ವಾಟ್ಸ್ಆ್ಯಪ್, ಟೆಲೆಗ್ರಾಂ, ಫೇಸ್ಬುಕ್ ಮೆಸೇಂಜರ್, ಕ್ಲಬ್ಹೌಸ್ ಮತ್ತು ಇತರ ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರ ಸಂಘಟನೆ ಜತೆಗೆ ಸಂಪರ್ಕ ಇರಿಸಿಕೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ