ಬರೇಲಿಯಲ್ಲಿ ಮನೆಗೆ ಬೆಂಕಿ: ಸಹೋದರಿಯರಿಬ್ಬರಿಗೆ ಗಂಭೀರ ಗಾಯ
Team Udayavani, Aug 12, 2017, 11:18 AM IST
ಬರೇಲಿ : ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದಲ್ಲಿ ಯಾರೋ ಅಪರಿಚಿತ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಮನೆಯೊಳಗೆ ಮಲಗಿಕೊಂಡಿದ್ದ ಇಬ್ಬರು ಸಹೋದರಿಯರು ತೀವ್ರ ಸುಟ್ಟಗಾಯಗಳಿಗೆ ಗುರಿಯಾದ ಘಟನೆ ನಿನ್ನೆ ಶುಕ್ರವಾರ ತಡ ರಾತ್ರಿ ಸಂಭವಿಸಿದೆ.
ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬೆಂಕಿ ಮನೆಯನ್ನು ಪೂರ್ತಿಯಾಗಿ ಅವರಿಸಿಕೊಂಡಾಗ ಮನೆಯವರು ಹೊರಗೋಡಿ ಬಂದರು. ಆದರೆ ಮನೆಯೊಳಗೆ ಮಲಗಿಕೊಂಡಿದ್ದ ಸಹೋದರಿಯರಿಬ್ಬರು ಅದಾಗಲೇ ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿದ್ದರು. ಆವರನ್ನು ಒಡನೆಯೇ ಆಸ್ಪತ್ರೆಗೆ ದಾಖಲಿಸಲಾಯಿತು.
ಗಾಯಗೊಂಡಿರುವ 18ರ ಹರೆಯದ ಗುಲ್ಶನ್ ಸ್ಥಿತಿ ಚಿಂತಾಜನಕವಿದೆ. ಆಕೆಯ 17ರ ಹರೆಯದ ಸಹೋದರಿ ಫಿಜಾಗೆ ಶೇ.40ರಷ್ಟು ಸುಟ್ಟಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಸು ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ದುಷ್ಕರ್ಮಿಗಳ ಶೀಘ್ರಾತಿಶೀಘ್ರ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು