ವಿವಾಹ ಆಮಂತ್ರಣದಲ್ಲಿ ಕೋವಿಡ್ ಜಾಗೃತಿ : ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬರಲು ಆಹ್ವಾನ
Team Udayavani, Apr 18, 2021, 4:02 PM IST
ಉತ್ತರಾಖಂಡ ; ಉತ್ತರಾಖಂಡದ ನವ ಜೋಡಿಯು ವಿಶೇಷ ರೀತಿಯ ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡುವ ಮೂಲಕ ಗಮನ ಸೆಳೆದಿದೆ. ಆಮಂತ್ರಣ ಪತ್ರಿಕೆಯಲ್ಲಿ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬರುವಂತೆ ವಿನಂತಿ ಮಾಡಿಕೊಂಡಿದ್ದಾರೆ.
ವಿಜಯ್ ಸಿಂಗ್ ಮತ್ತು ವೈಶಾಲಿ ಎಂಬುವವರು ಮದುವೆಯಾಗುತ್ತಿದ್ದು, ಈ ನವಜೋಡಿ ಏಪ್ರಿಲ್ 24 ರಂದು ಜೈಪುರದಲ್ಲಿ ಹಸೆಮಣೆ ಏರುತ್ತಿದ್ದಾರೆ. ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ, ಮದುವೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ತರುವಂತೆ ವಿನಂತಿಸಿದ್ದಾರೆ. ಇನ್ನು ಮದುವೆಗೆ ಬರುವ ಎಲ್ಲಾ ಅತಿಥಿಗಳು ಟೆಸ್ಟ್ ರಿಪೋರ್ಟ್ ತರುವಂತೆ ತಿಳಿಸಿದ್ದಾರೆ.
ಮದುವೆ ಆಮಂತ್ರಣ ಪತ್ರವನ್ನು ವಿತರಿಸುವ ಮೊದಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಭೆ ಸಮಾರಂಭ, ವಿವಾಹ ಕಾರ್ಯಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ ನಮಗೆ ತಿಳಿದಿತ್ತು. ಎಲ್ಲಾ ಮಾರ್ಗಸೂಚಿಗಳನ್ನು ಮದುವೆ ಸಮಾರಂಭದಲ್ಲಿ ನಾವು ಅನುಸರಿಸುತ್ತೇವೆ ಎಂದು ವರ ವಿಜಯ್ ಹೇಳಿದ್ದಾರೆ.
ಮತ್ತೊಷ್ಟು ಮಾಹಿತಿ ನೀಡಿರುವ ಇವರು ಮದುವೆಗೆ 300-400 ಜನರನ್ನು ಆಹ್ವಾನಿಸಲು ನಿರ್ಧರಿಸಲಾಗಿದ್ದು, ಆದ್ರೆ ಕೋವಿಡ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 30-40 ಜನರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ