
ಅಂಬೇಡ್ಕರ್ ಪ್ರತಿಮೆ ಭಗ್ನ: ಪೊಲೀಸರಿಂದ ವ್ಯಕ್ತಿ ಬಂಧನ
Team Udayavani, Jan 28, 2023, 7:10 PM IST

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಚೌಬೆ ಚಾಪ್ರಾ ಗ್ರಾಮದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಭಗ್ನಗೊಳಿಸಿದ ಆರೋಪದಲ್ಲಿ ಪೊಲೀಸರು ಶನಿವಾರ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
“ಅಂಬೇಡ್ಕರ್ ಪ್ರತಿಮೆ ಭಗ್ನಗೊಳಿಸಿದ ಸಂಬಂಧ ಆರೋಪಿ ಚಂದ್ರಶೇಖರ್ ಸಿಂಗ್‌ನನ್ನು ಬಂಧಿಸಲಾಗಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.
“ಸ್ಥಳೀಯರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ,’ ಎಂದು ಹೆಚ್ಚುವರಿ ಎಸ್‌ಪಿ ದುರ್ಗಾ ಪ್ರಸಾದ್ ತಿವಾರಿ ತಿಳಿಸಿದ್ದಾರೆ. “ಹಾನಿಯಾಗಿದ್ದ ಪ್ರತಿಮೆಯ ಭಾಗವನ್ನು ಸರಿಪಡಿಸಲಾಗಿದೆ. ಗ್ರಾಮದಲ್ಲಿ ಪರಿಸ್ಥತಿ ಶಾಂತಿಯುತವಾಗಿದೆ,’ ಎಂದರು.
ಇದನ್ನೂ ಓದಿ : ಜನ ಸಂಕಲ್ಪಯಾತ್ರೆ: ಅಮಿತ್ ಶಾ ಬರುತ್ತಿದ್ದಂತೆ ಮೊಳಗಿದ ಜಯಘೋಷ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ನ್ಯಾಯಾಲಯದಿಂದ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ʻಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್: ಗುಜರಾತ್‌ನಲ್ಲಿ 8 ಜನ ಪೋಲಿಸ್ ವಶಕ್ಕೆ