ಗೋವಾದಲ್ಲಿ 18 ರಿಂದ 44 ವರ್ಷದವರಿಗೆ ಲಸಿಕಾ ಕಾರ್ಯ ಸ್ಥಗಿತ
Team Udayavani, May 24, 2021, 12:08 PM IST
ಪಣಜಿ: ಗೋವಾ ರಾಜ್ಯದಲ್ಲಿ 18 ರಿಂದ 44 ವರ್ಷದ ವಯಸ್ಸಿನ ಜನರಿಗೆ ಆರಂಭಿಸಿದ್ದ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಲಸಿಕೆ ಅಭಾವದಿಂದಾಗಿ ಸ್ಥಗಿತಗೊಳಿಸಲಾಗಿದೆ.
ಕೋವಿಡ್ ಲಸಿಕಾ ಅಭಿಯಾನದ ಪ್ರಮುಖ ಡಾ ರಾಜೇಂದ್ರ ಬೋರಕರ್ ಈ ಕುರಿತು ಮಾಹಿತಿ ನೀಡಿ- ರಾಜ್ಯದಲ್ಲಿನ 18 ರಿಂದ 44 ವರ್ಷದ ವಯಸ್ಸಿನ ನಾಗರೀಕರಿಗೆ ಕೋವಿಡ್ ಲಸಿಕೆ ನೀಡಲು 32,470 ಕೋವಿಡ್ ಲಸಿಕೆ ಡೋಸ್ ಗೋವಾಕ್ಕೆ ಬಂದಿತ್ತು. ಇದುವರೆಗೂ ಈ ವಯೋಮಿತಿಯ ನಾಗರೀಕರಿಗೆ ಲಸಿಕೆ ನೀಡಿ ಸದ್ಯ ಲಸಿಕೆ ಖಾಲಿಯಾಗಿದೆ. ಇದೀಗ 36580 ಕೋವಿಡ್ ಲಸಿಕೆ ಡೋಸ್ ಮಂಜೂರಾಗಿದೆ. ಈ ಲಸಿಕೆ ಗೋವಾಕ್ಕೆ ಆಗಮಿಸುತ್ತಿದ್ದಂತೆಯೇ ಲಸಿಕಾ ಅಭಿಯಾನವನ್ನು ಆರಂಭಿಸಲಾಗುವುದು ಎಂಬ ಮಾಹಿತಿ ನೀಡಿದರು.
ಇದನ್ನೂ ಓದಿ :ನಾರದ ಲಂಚ ಕೇಸ್: ಕೋಲ್ಕತಾ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಬಿಐ
ರಾಜ್ಯದಲ್ಲಿನ 45 ವರ್ಷಕ್ಕೂ ಮೇಲ್ಪಟ್ಟ ವಯಸ್ಸಿನ ನಾಗರೀಕರಿಗೆ ಮಂಗಳವಾರದಿಂದ ಲಸಿಕಾ ಅಭಿಯಾನ ಆರಂಭಗೊಳ್ಳಲಿದ್ದು ಇದುವರೆಗೂ ಯಾರು ಲಸಿಕೆ ಪಡೆದುಕೊಂಡಿಲ್ಲವೊ ಅವರು ಹತ್ತಿರದ ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಡಾ. ರಾಜೇಂದ್ರ ಬೋರಕರ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ