IIT ವಿದ್ಯಾರ್ಥಿನಿ ಗ್ಯಾಂಗ್ ರೇಪ್; ವಾರಾಣಸಿ ಪೊಲೀಸರಿಂದ ಮೂವರು ಆರೋಪಿಗಳ ಬಂಧನ
ಕೃತ್ಯ ಎಸಗಿ ವಿಡಿಯೋ, ಫೋಟೋ ಶೂಟ್ ಮಾಡಿದ್ದರು...
Team Udayavani, Dec 31, 2023, 7:26 PM IST
ವಾರಾಣಸಿ: ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಕ್ಯಾಂಪಸ್ನಲ್ಲಿ ಐಐಟಿಯ ಮಹಿಳಾ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಮತ್ತು ಸಕ್ಷಮ್ ಪಟೇಲ್ ಎಂದು ಗುರುತಿಸಲಾಗಿದೆ ಎಂದು ಲಂಕಾ ಪೊಲೀಸ್ ಠಾಣೆಯ ಉಸ್ತುವಾರಿ ಶಿವಕಾಂತ್ ಮಿಶ್ರಾ ಹೇಳಿದ್ದಾರೆ.
ನವೆಂಬರ್ 1 ರ ರಾತ್ರಿ ಅತ್ಯಾಚಾರ ಎಸಗಲಾಗಿದ್ದು, ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಹಾಸ್ಟೆಲ್ನಿಂದ ಹೊರ ಹೋಗಿದ್ದಾಗ ಮೋಟಾರ್ಸೈಕಲ್ನಲ್ಲಿ ಬಂದ ಮೂವರು, ವಿದ್ಯಾರ್ಥಿನಿಯನ್ನು ಸ್ನೇಹಿತನಿಂದ ಬೇರ್ಪಡಿಸಿ ಬಲವಂತವಾಗಿ ಎಳೆದೊಯ್ದು ಬಾಯಿಯನ್ನು ಬಿಗಿದಿಟ್ಟು ವಿವಸ್ತ್ರಗೊಳಿಸಿ ಕೃತ್ಯ ಎಸಗಿ ವಿಡಿಯೋ, ಫೋಟೋ ಶೂಟ್ ಮಾಡಿದ್ದಾರೆ. ಸುಮಾರು 15 ನಿಮಿಷಗಳ ನಂತರ ಸಂತ್ರಸ್ತೆಯ ಮೊಬೈಲ್ ಸಂಖ್ಯೆ ಪಡೆದು ಬಿಟ್ಟಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಐಪಿಸಿಯ ಸೆಕ್ಷನ್ 354 ಮತ್ತು ಲಂಕಾ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣವನ್ನು ಸಾಮೂಹಿಕ ಅತ್ಯಾಚಾರದ ವಿಭಾಗದಲ್ಲಿ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?