ಬಾಲಕೋಟ್ ದಾಳಿ; ಐಎಎಫ್ ಪೈಲಟ್ ಗಳಿಗೆ ವಾಯುಸೇನಾ ಶೌರ್ಯ ಪದಕ ಗೌರವ

Team Udayavani, Aug 14, 2019, 1:46 PM IST

ನವದೆಹಲಿ:ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿ ಪರಾಕ್ರಮ ಮೆರೆದಿದ್ದ ಭಾರತೀಯ ವಾಯುಪಡೆಯ (ಐಎಎಫ್)ವೀರ ಪೈಲಟ್, ವಿಂಗ್ ಕಮಾಂಡರ್ ಗಳಿಗೆ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ವಾಯುಸೇನಾ ಶೌರ್ಯ ಪ್ರಶಸ್ತಿ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ.

ಪಾಕಿಸ್ತಾನದ ಬಾಲಕೋಟ್ ನಗರದಲ್ಲಿನ ಜೈಶ್ ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿದ್ದ ಐಎಎಫ್ ವಿಂಗ್ ಕಮಾಂಡರ್ ಗಳಾದ ಅಮಿತ್ ರಂಜನ್, ಸ್ವಾರ್ಡರ್ನ್ ಲೀಡರ್ ಗಳಾದ ರಾಹುಲ್ ಬಾಸೋಯ, ಪಂಕಜ್ ಭುಜಾಡೆ, ಬಿಕೆಎನ್ ರೆಡ್ಡಿ ಮತ್ತು ಶಶಾಂಕ್ ಸಿಂಗ್ ಗೆ ವಾಯುಸೇನಾ ಶೌರ್ಯ ಪದಕ ನೀಡಿ ಗೌರವಿಸಲಿದೆ ಎಂದು ವರದಿ ತಿಳಿಸಿದೆ.

ಇವರೆಲ್ಲಾ ಐಎಎಫ್ ನ ಮೀರಜ್ 2000 ಯುದ್ಧ ವಿಮಾನದ ಪೈಲಟ್ ಗಳಾಗಿದ್ದಾರೆ. 2019ರ ಫೆಬ್ರುವರಿಯಲ್ಲಿ ಬಾಲಕೋಟ್ ನಲ್ಲಿನ ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿತ್ತು. ಪುಲ್ವಾಮಾದಲ್ಲಿ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸಿಆರ್ ಪಿಎಫ್ ನ 40 ಯೋಧರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ ಪರಿಣಾಮ ಹುತಾತ್ಮರಾಗಿದ್ದರು. ಈ ಕೃತ್ಯಕ್ಕೆ ಭಾರತೀಯ ಸೇನೆ ಬಾಲಕೋಟ್ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚರ್ಯರ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ