ಹಿಜ್ಬುಲ್ ಉಗ್ರರಿಗೆ ಶಸ್ತ್ರಾಸ್ತ್ರ ಮಾರಾಟ: ವ್ಯಕ್ತಿಯ ಬಂಧನ
Team Udayavani, Jan 7, 2020, 7:51 PM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶಾರ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರರಿಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಗ್ರಾಮ ರಕ್ಷಣಾ ಸಮಿತಿ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ನವೆಂಬರ್ನಲ್ಲಿ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ತಾರಿಖ್ ಹುಸೈನ್ ಎಂಬಾತನ ವಿಚಾರಣೆ ವೇಳೆ ಆತ, ತನಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದು ಕಿಶಾ¤$Ìರ್ನ ದೇವಿ ದಾಸ್ ಎಂದು ಬಾಯಿಬಿಟ್ಟಿದ್ದಾನೆ. ಅದರ ಆಧಾರದಲ್ಲಿ ದಾಸ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮತ್ತೂಂದು ಘಟನೆಯಲ್ಲಿ, ಪಾಕಿಸ್ತಾನದ ಯುವತಿಯ ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು, ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ರವಾನಿಸಿದ ಆರೋಪದಲ್ಲಿ ಗಡಿ ಗ್ರಾಮ ಅರ್ನಿಯಾದ ರಾಕೇಶ್ ಕುಮಾರ್ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ಈತನ ವಿರುದ್ಧ ಬೇಹುಗಾರಿಕೆ ಆರೋಪವನ್ನೂ ಹೊರಿಸಲಾಗಿದೆ.
ಈ ನಡುವೆ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಸ್ಥಳೀಯ ಉಗ್ರನೊಬ್ಬನನ್ನು ಹತ್ಯೆಗೈದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…