ವೇಣುಗೋಪಾಲ್ ಅಧಿಕಾರ ಸ್ವೀಕಾರ
Team Udayavani, May 5, 2017, 2:50 AM IST
ಹೊಸದಿಲ್ಲಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರಲು ನಮ್ಮದೇ ತಂತ್ರಗಾರಿಕೆಗಳಿವೆ ಎಂದು ಎಐಸಿಸಿ ಉಸ್ತುವಾರಿ ವೇಣುಗೋಪಾಲ್ ತಿಳಿಸಿದ್ದಾರೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಗುರುವಾರ ಕರ್ನಾಟಕದ ಉಸ್ತುವಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು. ಪಕ್ಷದಲ್ಲಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮ್ಮ ತಂತ್ರಗಾರಿಕೆ ಏನು ಎಂಬುದು ಮಾಧ್ಯಮಗಳ ಮುಂದೆ ಹೇಳಲಾಗದು ಎಂದರು.
ಮೇ 8ರಂದು ಕರ್ನಾಟಕಕ್ಕೆ ನಾಲ್ವರು ಕಾರ್ಯದರ್ಶಿಗಳ ತಂಡದ ಜತೆ ಭೇಟಿ ನೀಡುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಸೇರಿದಂತೆ ಎಲ್ಲ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದೇನೆ ಎಂದು ಹೇಳಿದರು. ಕೆಪಿಸಿಸಿ ಅಧ್ಯಕ್ಷರ ನೇಮಕ ಸಂಬಂಧ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು ಸಹಿತ ಎಲ್ಲ ನಾಯಕರ ಜತೆ ಚರ್ಚಿಸಿ ಹೈಕಮಾಂಡ್‌ಗೆ ವರದಿ ನೀಡಲಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ