ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿರ
Team Udayavani, Jan 15, 2022, 9:30 PM IST
ಮುಂಬೈ: ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್(92) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಇನ್ನೂ 8-10 ದಿನಗಳ ಕಾಲ ಅವರು ವೈದ್ಯರ ಪರಿಶೀಲನೆಯಲ್ಲೇ ಇರಲಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ವೈದ್ಯರು ತಿಳಿಸಿದ್ದಾರೆ.
ಲತಾ ಅವರಿಗೆ ಈ ತಿಂಗಳ ಆರಂಭದಲ್ಲಿ ಕೆಲ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರಲ್ಲಿ ಕೊರೊನಾ ದೃಢವಾಗಿದ್ದಾಗಿ ವೈದ್ಯರು ತಿಳಿಸಿದ್ದರು.
ಇದನ್ನೂ ಓದಿ:ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆಗೆ ಕೋವಿಡ್ ಸೋಂಕು ದೃಢ
2019ರಲ್ಲಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಲತಾ ಅವರು 28 ದಿನಗಳ ಕಾಲ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ