ಇಂದು ಉಪರಾಷ್ಟ್ರಪತಿ ಚುನಾವಣೆ; ಧನ್ಕರ್ ಉಪರಾಷ್ಟ್ರಪತಿ? ಸಂಜೆಯೇ ಫಲಿತಾಂಶ ಪ್ರಕಟ
Team Udayavani, Aug 6, 2022, 7:05 AM IST
ನವದೆಹಲಿ: ಇದೇ 11ಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಅವಧಿ ಅಂತ್ಯವಾಗಲಿದ್ದು, ಇದಕ್ಕಾಗಿ ಶನಿವಾರ ಚುನಾವಣೆ ನಡೆಯಲಿದೆ.
ಈಗಿರುವ ಅಂಕಿ ಸಂಖ್ಯೆಗಳನ್ನು ನೋಡುವುದಾದರೆ, ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನ್ಕರ್ ಅವರೇ ಗೆಲುವು ಸಾಧಿಸಲಿದ್ದಾರೆ ಎಂದೇ ಹೇಳಲಾಗುತ್ತಿದೆ. ಅಂದ ಹಾಗೆ ಸಂಜೆಯೇ ಫಲಿತಾಂಶ ಹೊರಬೀಳಲಿದ್ದು, ಗೆಲ್ಲುವ ಅಭ್ಯರ್ಥಿ 11ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಎನ್‌ಡಿಎಯಿಂದ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನ್ಕರ್ ಮತ್ತು ಪ್ರತಿಪಕ್ಷಗಳ ಕಡೆಯಿಂದ ಕಾಂಗ್ರೆಸ್ ನಾಯಕಿ ಮತ್ತು ಕರ್ನಾಟಕ ಮಾರ್ಗರೇಟ್ ಆಳ್ವಾ ಅವರು ಸ್ಪರ್ಧಿಸಿದ್ದಾರೆ. ಈ ಚುನಾವಣೆಯಲ್ಲಿ ಕೇವಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮಾತ್ರ ಮತ ಹಾಕುವುದರಿಂದ ಇಲ್ಲಿ ಧನ್ಕರ್ ಅವರಿಗೆ ಗೆಲುವು ನಿಶ್ಚಿತ. ಏಕೆಂದರೆ, ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಎನ್‌ಡಿಎ ಹೆಚ್ಚು ಸ್ಥಾನ ಹೊಂದಿದೆ.
ವಿಚಿತ್ರವೆಂದರೆ, ಲೋಕಸಭೆಯಲ್ಲಿ 36 ಸಂಸದರನ್ನು ಹೊಂದಿರುವ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷ, ಚುನಾವಣಾ ಪ್ರಕ್ರಿಯೆಯಿಂದಲೇ ಹೊರಗುಳಿದಿದೆ. ಆಮ್ ಆದ್ಮಿ ಪಾರ್ಟಿ ಮತ್ತು ಜೆಎಂಎಂ ಪ್ರತಿಪಕ್ಷ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರೂ, ಗೆಲುವಿಗೆ ಬೇಕಾದ ಮತಗಳಿಲ್ಲ.
ಅಂದರೆ, ಲೋಕಸಭೆ ಮತ್ತು ರಾಜ್ಯಸಭೆಗಳನ್ನು ಸೇರಿಸಿ ಒಟ್ಟಾರೆಯಾಗಿ 788 ಮತಗಳಿವೆ. ಎನ್‌ಡಿಎ ಎರಡನ್ನೂ ಸೇರಿಸಿದರೆ 510 ಮತಗಳನ್ನು ಹೊಂದಿದೆ. ಪ್ರತಿಪಕ್ಷಗಳ ಬಳಿ ಸುಮಾರು 200 ಮತಗಳಿವೆ. ಆದರೆ, ಅಧ್ಯಕ್ಷೀಯ ಚುನಾವಣೆಯಲ್ಲಿ ಬಹಳಷ್ಟು ಅಡ್ಡಮತಗಳಾಗಿದ್ದು, ಇಲ್ಲೂ ಅದೇ ಮುಂದುವರಿದರೆ ಪ್ರತಿಪಕ್ಷಗಳ ಅಭ್ಯರ್ಥಿಯ ಮತಗಳ ಸಂಖ್ಯೆ ಕಡಿಮೆಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ವಜಾರೋಹಣ:ಗಮನಸೆಳೆದ ಪ್ರಧಾನಿ ಮೋದಿ ಪೇಟಾ, ಬಿಳಿಕುರ್ತಾ; ಈ ಬಾರಿ ಟೆಲಿಪ್ರಾಂಪ್ಟರ್ ಗೆ ಕೊಕ್
ಮುಂದಿನ ಪೀಳಿಗೆಗಾಗಿ ನವಭಾರತದ ನಿರ್ಮಾಣ :ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ
ನಿಮ್ಮ ಮಕ್ಕಳಿಗೆ ವಿದ್ಯಾರ್ಥಿ ವೇತನ ಬೇಕೇ? ಹಾಗಾದರೆ ನೀವು ಮದ್ಯಪಾನ ತ್ಯಜಿಸಿ
38 ವರ್ಷಗಳ ನಂತರ ಸಿಕ್ಕಿತು ಹುತಾತ್ಮ ಯೋಧನ ಮೂಳೆ! ಅಂತಿಮ ನಮನಕ್ಕಾಗಿ ಕಾಯುತ್ತಿದೆ ಕುಟುಂಬ
ದೇವೇಂದ್ರ ಫಡ್ನವೀಸ್ಗೆ ಮಹಾ ಗೃಹ, ಆರ್ಥಿಕ ಹೊಣೆ
MUST WATCH
ಹೊಸ ಸೇರ್ಪಡೆ
ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಇದ್ದಾರೆ: ಕಾಂಗ್ರೆಸ್ ನಾಯಕರಿಗೆ ಸಿಎಂ ತಿರುಗೇಟು
ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್
ಬೆಂಗಳೂರಿನ ಸ್ವಾತಂತ್ರ್ಯ ಚಳವಳಿ ಉಳಿದ ನಗರಗಳಿಗಿಂತ ಭಿನ್ನ
ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ
ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು