ಯಾರಾಗಲಿದ್ದಾರೆ ಗುಜರಾತ್ನ ಮುಂದಿನ ಸಿಎಂ?
Team Udayavani, Sep 11, 2021, 5:34 PM IST
ಅಹ್ಮದಾಬಾದ್ : ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲ ಮನೆ ಮಾಡಿದೆ.
ಮತ್ತೊಂದು ಬಾರಿ ಗುಜರಾತ್ ಗದ್ದುಗೆ ಏರಲು ಬಿಜೆಪಿ ಹೈಕಮಾಂಡ್ ಸಿದ್ಧತೆ ನಡೆಸಿದೆ. ಇದರ ಮೊದಲ ಹೆಜ್ಜೆ ಎನ್ನುವಂತೆ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ರಾಜೀನಾಮೆ ಪಡೆದಿದೆ. ರೂಪಾನಿ ಅವರ ರಾಜೀನಾಮೆ ದಿಢೀರ್ ಅನ್ನಿಸಿದರೂ, ಇದರ ಹಿಂದೆ ಹೈಕಮಾಂಡ್ನ ವ್ಯವಸ್ಥಿತ ಯೋಜನೆ ಇದೆ ಎನ್ನುವುದು ರಾಜಕೀಯ ಪಂಡಿತರ ವಾದವಾಗಿದೆ.
ರೂಪಾನಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು, ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿವೆ. ಈ ಮೂವರಲ್ಲಿ ಮುಖ್ಯಮಂತ್ರಿ ಕುರ್ಚಿ ಯಾರಿಗೆ ಒಲಿಯಲಿದೆ ಎನ್ನುವುದು ಸದ್ಯಕ್ಕೆ ಕುತೂಹಲದ ಕೇಂದ್ರ ಬಿಂದುವಾಗಿದೆ.
ಇನ್ನು ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಪಕ್ಷದ ಪ್ರಕ್ರಿಯೆಗೆ ಅನುಗುಣವಾಗಿ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಭೂಪೇಂದ್ರ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್