ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ
Team Udayavani, May 23, 2022, 9:39 PM IST
ನವದೆಹಲಿ : ವಿನಯ್ ಕುಮಾರ್ ಸಕ್ಸೇನಾ ಅವರು ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಸೋಮವಾರ ನೇಮಕಗೊಂಡಿದ್ದಾರೆ.
ವೈಯಕ್ತಿಕ ಕಾರಣಗಳನ್ನು ನೀಡಿ ಹಿಂದಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ ನೀಡಿದ ಕೆಲವೇ ದಿನಗಳ ನಂತರ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಲಾಗಿದೆ. ಇತ್ತೀಚಿನವರೆಗೂ, ಸಕ್ಸೇನಾ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದರು.
ಭಾರತದ ರಾಷ್ಟ್ರಪತಿಗಳು ವಿನಯ್ ಕುಮಾರ್ ಸಕ್ಸೇನಾ ಅವರನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯನ್ನು ನೀಡಿದ್ದಾರೆ.