ಪ್ರಿಯಾಂಕಾ ಬಗ್ಗೆ ಕಟಿಯಾರ್ sexist ಕಮೆಂಟ್! ಕ್ಷಮೆಯಾಚನೆಗೆ ನಕಾರ
Team Udayavani, Jan 25, 2017, 12:37 PM IST
ಲಕ್ನೋ : ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಏರತೊಡಗಿದ್ದು, ರಾಜಕಾರಣಿಗಳ ಹೇಳಿಕೆಗಳು ಹೊಸ ವಿವಾದಗಳನ್ನು ಹುಟ್ಟು ಹಾಕುತ್ತಿವೆ. ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ವಿನಯ್ ಕಟಿಯಾರ್ ಅವರು ಪ್ರಿಯಾಂಕಾ ಗಾಂಧಿ ವಾದ್ರಾಗಿಂತ ನಮ್ಮ ಪಕ್ಷ ದಲ್ಲಿ ಸುಂದರಿಯರಿಲ್ಲವೇ ಎಂದು ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯ ಸಂದರ್ಶಕ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಪ್ರಚಾರ ನಡೆಸುವ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಕಟಿಯಾರ್ “ಏನಾಯ್ತು.. ಅವರಿಗಿಂತ ಸುಂದರಿಯರು ನಮ್ಮ ಪಕ್ಷದಲ್ಲಿಲ್ಲವೆ.. ಹಿರೋಹಿನ್ಗಳಿಲ್ಲವೆ.. ಸ್ಟಾರ್ ಕ್ಯಾಂಪೇನರ್ಗಳಿಲ್ಲವೆ..ಅವರೇನು ಅಂತಹಾ ಸುಂದರಿಯಲ್ಲ”ಎಂದು ವಿವಾದ ಹುಟ್ಟು ಹಾಕಿದರು.
62 ರ ಹರೆಯದ ಕಟಿಯಾರ್ ಅವರು ಬಜರಂಗದಳದ ಸಂಸ್ಥಾಪಕ ಅಧ್ಯಕ್ಷರಾಗಿದ್ದರು,ಉತ್ತರ ಪ್ರದೇಶದ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ವಿಶೇಷವೆಂದರೆ ಬಿಜೆಪಿ ಬಿಡುಗಡೆ ಮಾಡಿದ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಅವರ ಹೆಸರಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ