ನಂಬಿಕೆ ಹೆಸರಿನಲ್ಲಿ ಹಿಂಸಾಚಾರ ಸಲ್ಲದು; ಪ್ರಧಾನಿ ಮೋದಿ
Team Udayavani, Aug 15, 2017, 2:58 PM IST
ನವದೆಹಲಿ:ನಂಬಿಕೆ ಹೆಸರಿನಲ್ಲಿ ಹಿಂಸಾಚಾರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇತ್ತೀಚೆಗೆ ದೇಶದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ನಂಬಿಕೆ ಹೆಸರಿನಲ್ಲಿ ಹಿಂಸಾಚಾರದಿಂದ ಏನೂ ಸಾಧ್ಯವಿಲ್ಲ, ಇದನ್ನು ಭಾರತದಲ್ಲಿ ಒಪ್ಪಲು ಸಾಧ್ಯವಿಲ್ಲ. ನಮ್ಮ ದೇಶದಲ್ಲಿ ಶಾಂತಿಗೆ, ಸಹಬಾಳ್ವೆ ಹಾಗೂ ಒಗ್ಗಟ್ಟಿಗೆ ಹೆಚ್ಚಿನ ಬೆಲೆ ಎಂದು ಹೇಳಿದರು.
ಜಾತಿವಾದ ಮತ್ತು ಕೋಮುವಾದ ಕೂಡಾ ಭಾರತದಲ್ಲಿ ಯಾವುದೇ ರೀತಿಯಲ್ಲಿ ಉಪಯೋಗಕ್ಕೆ ಬಾರದು ಎಂದು ಕೆಂಪುಕೋಟೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಜಾತಿವಾದ ಮತ್ತು ಕೋಮುವಾದ ವಿಷವಿದ್ದಂತೆ ಇದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ, ಅಲ್ಲದೇ ಇದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಬೇಡಿ ಎಂದು ಮೋದಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ