ಕೆಲಸಕ್ಕೆ ಕರೆಸಿಕೊಂಡು 5 ತಿಂಗಳಿನಿಂದ ಬಾಲಕಿಗೆ ಹಲ್ಲೆ,ದೌರ್ಜನ್ಯ: ದಂಪತಿ ಬಂಧನ

14 ವರ್ಷದ ಬಾಲಕಿಗೆ ಮೃಗರಾದ ದಂಪತಿ

Team Udayavani, Feb 8, 2023, 1:45 PM IST

ಕೆಲಸಕ್ಕೆ ಕರೆಸಿಕೊಂಡು 5 ತಿಂಗಳಿನಿಂದ ಬಾಲಕಿಗೆ ಹಲ್ಲೆ,ದೌರ್ಜನ್ಯ: ದಂಪತಿ ಬಂಧನ

ಗುರುಗ್ರಾಮ್:‌ ಮನೆ ಕೆಲಸಕ್ಕೆಂದು ಬಾಲಕಿಯನ್ನು ಮನೆಯಲ್ಲಿ ಇರಿಸಿಕೊಂಡು ದೈಹಿಕವಾಗಿ ಹಲ್ಲೆಗೈದು, ದೌರ್ಜನ್ಯವೆಸಗಿರುವ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ದಂಪತಿಯನ್ನು ಬಂಧಿಸಲಾಗಿದೆ.

ಗುರುಗ್ರಾಮದ ದಂಪತಿ ಕೆಲಸಗಾರರನ್ನು ನೇಮಿಸುವ ಖಾಸಗಿ ಸಂಸ್ಥೆಯೊಂದರಿಂದ ತನ್ನ ಮೂರುವರೆ ವರ್ಷದ ಮಗಳನ್ನು ನೋಡಿಕೊಳ್ಳಲು ಅಪ್ರಾಪ್ತೆ ಬಾಲಕಿಯನ್ನು ನೇಮಿಸಿಕೊಂಡಿದ್ದರು. ಜಾರ್ಖಂಡ್‌ ಮೂಲದ ಬಾಲಕಿಯನ್ನು ದಂಪತಿಗಳು ಪ್ರತಿನಿತ್ಯ ಹಲ್ಲೆ ಮಾಡಿ, ಆಕೆಯ ಮೇಲೆ ದೈಹಿಕವಾಗಿ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬ ಪತ್ರಕರ್ತೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಪತ್ರಕರ್ತೆ ದೀಪಿಕಾ ನಾರಾಯಣ್  ಎನ್‌ ಜಿಒವೊಂದಕ್ಕೆ ಈ ಬಗ್ಗೆ ಮಾಹಿತಿ ಕೊಟ್ಟು, ಅವರ ಸಹಾಯದಿಂದ ಬಾಲಕಿಯನ್ನು ರಕ್ಷಿಸಿದ್ದಾರೆ. ಎನ್‌ ಜಿಒ ಕೊಟ್ಟ ದೂರಿನ ಮೇರೆಗೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ದೀಪಿಕಾ ನಾರಾಯಣ್ ಭಾರದ್ವಾಜ್ ಟ್ವಿಟರ್‌ ನಲ್ಲಿ ಮಾಹಿತಿ ನೀಡಿದ್ದಾರೆ.

ಈ 14 ವರ್ಷದ ಬಾಲಕಿಯನ್ನು ವಿದ್ಯಾವಂತ ದಂಪತಿಗಳು ಅಮಾನುಷವಾಗಿ ಥಳಿಸಿದ್ದಾರೆ. ದೇಹದ ಪ್ರತಿಯೊಂದು ಭಾಗಕ್ಕೂ ಹಿಂಸಿಸಿದ್ದಾರೆ. ಅವಳ ಮೈಯನ್ನು ಸುಟ್ಟಿದ್ದಾರೆ. ಬ್ಲೇಡ್‌ ನಿಂದ ಅವಳ ದೇಹದ ಭಾಗಕ್ಕೆ ಹಾನಿ ಮಾಡಿದ್ದಾರೆ. ಎಷ್ಟೋ ದಿನದಿಂದ ಅವಳಿಗೆ ಊಟವೂ ಹಾಕಿಲ್ಲ. ಅವಳು ಕಸದ ಬುಟ್ಟಿಯಲ್ಲಿ ಉಳಿದ ಊಟವನ್ನು ತಿನ್ನುತ್ತಿದ್ದಳು. ದೈಹಿಕವಾಗಿಯೂ ಆಕೆಯ ಮೇಲೆ ದೌರ್ಜನ್ಯವೆಸಗಿದ್ದಾರೆ. ಅವಳಿಗೆ ನಿದ್ದೆಯನ್ನೂ ಮಾಡಲು ಬಿಟ್ಟಿಲ್ಲ. ಅವಳ ಬದುಕನ್ನು ನರಕವಾಗಿಸಿದ್ದಾರೆ ಎಂದು ದೀಪಿಕಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಪೊಲೀಸರು ಘಟನೆ ಬಗ್ಗೆ ಪೋಕ್ಸೋ ಹಾಗೂ ಇತರ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡು  ಮನೀಶ್ ಕೌರ್ ಮತ್ತು ಕಮಲ್ಜೀತ್ ಕೌರ್ ದಂಪತಿಯನ್ನು ಬಂಧಿಸಿದ್ದಾರೆ.

ಮಾನಸಿಕ, ದೈಹಿಕವಾಗಿ ಆಘಾತಕ್ಕೆ ಒಳಗಾಗಿರುವ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪ್ರಾಪ್ತರನ್ನು ಕೆಲಸಕ್ಕೆ ಇಟ್ಟುಕೊಂಡ ಕಂಪೆನಿಯ ಬಗ್ಗೆ ಹಾಗೂ ಕುರಿತ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

sonda

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್