ಜಲ ವಿವಾದ ಪರಿಹಾರಕ್ಕೆ “ಏಕ ನ್ಯಾಯಮಂಡಳಿ’!

Team Udayavani, Mar 15, 2017, 6:17 AM IST

15-PTI-1.jpg

ಹೊಸದಿಲ್ಲಿ: ಕಾವೇರಿ, ಕೃಷ್ಣ, ಮಹಾದಾಯಿ… ಹೀಗೆ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ನೆರೆಯ ರಾಜ್ಯಗಳ ನಡುವಿನ  ನಿರಂತರ ಹೋರಾಟಕ್ಕೆ ಒಂದೇ ಸೂರಿನಡಿ ನ್ಯಾಯ ದೊರಕಿಸಿಕೊಡುವ ಪ್ರಯತ್ನಕ್ಕೆ ಕೇಂದ್ರ ಸರಕಾರ ಮುಂದಾಗಿದೆ.

ಕರ್ನಾಟಕ ಸೇರಿ ದೇಶದ ಬಹುತೇಕ ರಾಜ್ಯಗಳು ಎದುರಿಸುತ್ತಿರುವ ಅಂತಾರಾಜ್ಯ ನೀರು ಹಂಚಿಕೆ ವಿವಾದಗಳನ್ನು ಇತ್ಯರ್ಥಗೊಳಿಸಲು ಅಂತಾರಾಜ್ಯ ನದಿ ನೀರು ವ್ಯಾಜ್ಯಗಳ ಕಾಯ್ದೆ 1956 ಎಂಬ ಹೆಸರಿನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ. ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಇದೊಂದು ಕ್ರಾಂತಿಕಾರಿ ಬೆಳವಣಿಗೆಗೆ ಕಾರಣವಾಗಲಿದೆ ಎಂದಿದ್ದಾರೆ. ಅದೇ ವೇಳೆ ವಿಪಕ್ಷಗಳಿಂದ ಆಕ್ಷೇಪವೂ ಕೇಳಿಬಂದಿದ್ದು, ಬಿಜೆಡಿ ನಾಯಕ ಭತೃìಹರಿ ಮೆಹತಾಭ್‌ “ಇದೊಂದು ಲೋಪಪೂರಿತ ಮಸೂದೆ’. ಸರಕಾರ ಲೋಕಸಭೆಯಲ್ಲಿ  ಮಂಡಿಸುವುದಕ್ಕೂ ಮೊದಲು ರಾಜ್ಯಗಳ ಅಭಿಪ್ರಾಯಗಳನ್ನು ಕೇಳಬೇಕಿತ್ತು ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಉಮಾ, “ರಾಜ್ಯಗಳ ನಡುವಿನ ನೀರು ಹಂಚಿಕೆ ವಿವಾದಗಳು ಕ್ಷಿಪ್ರಗತಿಯಲ್ಲಿ ಪರಿಹಾರಗೊಳ್ಳಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಅಷ್ಟೆ. ಅದಕ್ಕೆ ಅವರು ಉದಾಹರಣೆಯನ್ನಾಗಿ ನೀಡಿದ್ದು ಕರ್ನಾಟಕ ಮತ್ತು ತಮಿಳುನಾಡು ನಡುವಿನ ದಶಕಗಳಷ್ಟು ಹಳೆಯದಾಗಿರುವ ಕಾವೇರಿ ನೀರಿನ ವ್ಯಾಜ್ಯ.

ಹೇಗೆ ರಚನೆಯಾಗಲಿದೆ ನ್ಯಾಯಮಂಡಳಿ?
ಅಂತಾರಾಜ್ಯ ನೀರು ಹಂಚಿಕೆ ವಿವಾದ ಏಕ ನ್ಯಾಯಮಂಡಳಿಯಲ್ಲಿ ಬೇರೆ ಬೇರೆ ನ್ಯಾಯಪೀಠಗಳ ನ್ಯಾಯಮೂರ್ತಿಗಳನ್ನು ಒಳಗೊಂಡಿರಲಿದೆ. ಮಸೂದೆಯಲ್ಲಿರುವಂತೆ ಈ ನೂತನ ನ್ಯಾಯಮಂಡಳಿಯಲ್ಲಿ ಒಬ್ಬ ಅಧ್ಯಕ್ಷ, ಒಬ್ಬ ಉಪಾಧ್ಯಕ್ಷ ಹಾಗೂ ಆರು ಅಥವಾ ಆರಕ್ಕಿಂತ ಹೆಚ್ಚು ಮಂದಿ ಸದಸ್ಯರು ಇರಲಿದ್ದಾರೆ.

ಕರ್ನಾಟಕ – ತಮಿಳುನಾಡು ನಡುವಿನ ಕಾವೇರಿ ವಿವಾದ ಸೇರಿ ಇಂಥ ಕ್ಲಿಷ್ಟ ಜಲ ವಿವಾದಗಳನ್ನು ಬಗೆಹರಿಸಲು ಹೊಸ ಕಾಯ್ದೆ ಸಹಕಾರಿ ಆಗಲಿದೆ.
ಉಮಾ ಭಾರತಿ, ಕೇಂದ್ರ ಜಲ ಸಂಪನ್ಮೂಲ ಸಚಿವೆ

ಮುಖ್ಯಾಂಶಗಳು
ಯಾವುದೇ ಜಲವಿವಾದ ನಾಲ್ಕೂವರೆ ವರ್ಷಕ್ಕಿಂತ ಜಾಸ್ತಿ ಇತ್ಯರ್ಥಗೊಳ್ಳದೇ ಇರುವಂತಿಲ್ಲ. ಇತ್ಯರ್ಥಕ್ಕೆ ಸಮಯ ನಿಗದಿಗೊಳಿಸುವುದು.

ನ್ಯಾಯಮಂಡಳಿ ನೀಡಿದ ತೀರ್ಪು ಅಂತಿಮವಾಗಿರಲಿದೆ. ಸಂಬಂಧಪಟ್ಟ ರಾಜ್ಯಗಳೂ ಇದಕ್ಕೆ ಬದ್ಧವಾಗಿರಬೇಕು.

ನ್ಯಾಯಮಂಡಳಿಯ ಮುಖ್ಯಸ್ಥರು, ಸದಸ್ಯರು ಐದು ವರ್ಷಕ್ಕಿಂತ ಹೆಚ್ಚು  ಕಾಲ ಸೇವೆಯಲ್ಲಿ ಇರುವಂತಿಲ್ಲ. 70 ವರ್ಷ ಮೇಲ್ಪಟ್ಟವರು ಮುಂದುವರಿಯುವಂತಿಲ್ಲ.

ಕೇಂದ್ರ ನೀರು ಸರಬರಾಜು ಇಲಾಖೆಯ ತಜ್ಞ ಎಂಜಿನಿಯರ್‌ಗಳೂ ನ್ಯಾಯಮಂಡಳಿಯಲ್ಲಿರಬೇಕು.

ವಿವಾದ ಪರಿಹಾರ ಸಮಿತಿ ರಾಜ್ಯಗಳ ಜತೆ ವಿವಾದದ ಕುರಿತು ಮಾತುಕತೆ ನಡೆಸಿದ ಬಳಿಕ ನ್ಯಾಯಮಂಡಳಿಯ ಮುಂದೆ ಕೊಂಡೊಯ್ಯಲಾಗುವುದು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.