ಮಹಿಳೆ ಮೇಲೆ ಮೂತ್ರವಿಸರ್ಜನೆ ಪ್ರಕರಣ: ಆರೋಪಿಯನ್ನು ಕೆಲಸದಿಂದ ಕಿತ್ತು ಹಾಕಿದ ಕಂಪನಿ
Team Udayavani, Jan 6, 2023, 10:57 PM IST
ನವದೆಹಲಿ: ಏರ್ಇಂಡಿಯಾ ವಿಮಾನದಲ್ಲಿ ನ.26ರಂದು ಸಹ ಮಹಿಳಾ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿಯ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಆರೋಪಿ ತಲೆಮರೆಸಿಕೊಂಡಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಮತ್ತೊಂದೆಡೆ ಆರೋಪಿ ಕಾರ್ಯನಿರ್ವಹಿಸುತ್ತಿದ್ದ ಮುಂಬೈನ ಸಂಸ್ಥೆ ಕೆಲಸದಿಂದ ಆತನನ್ನು ವಜಾಗೊಳಿಸಿದೆ.
ಇನ್ನು, ಏರ್ಇಂಡಿಯಾ ವಿಮಾನದಲ್ಲಿ ನಡೆದ ಘಟನೆಗಳನ್ನು ಪರಿಗಣಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಎಲ್ಲ ವಿಮಾನಯಾನ ಸಂಸ್ಥೆಗಳಿಗೂ ಸುತ್ತೋಲೆ ಹೊರಡಿಸಿದ್ದು, ವಿಮಾನದಲ್ಲಿ ಪ್ರಯಾಣಿಕರ ಯಾವುದೇ ಅಶಿಸ್ತಿನ ನಡವಳಿಕೆ ಕಂಡುಬಂದರೂ ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಕಾನೂನು ಜಾರಿ ಸಂಸ್ಥೆಗೆ ತಕ್ಷಣವೇ ಮಾಹಿತಿ ನೀಡಬೇಕು.. ಇಲ್ಲದಿದ್ದಲ್ಲಿ ವಿಮಾನಯಾನ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ