ನಮಗೆ ಸಿಎಎ ಬೇಡ : ಕಾಯ್ದೆ ವಿರುದ್ಧ ನಿಲುವಳಿ ಪ.ಬಂಗಾಲ ವಿಧಾನ ಸಭೆಯಲ್ಲಿ ಅಂಗೀಕಾರ

Team Udayavani, Jan 27, 2020, 6:59 PM IST

ಕೊಲ್ಕೊತ್ತಾ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಕ್ಕೆ ಪಶ್ಚಿಮ ಬಂಗಾಲದಲ್ಲಿ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ತೀವ್ರ ವಿರೋಧಿ ವ್ಯಕ್ತಪಡಿಸಿದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದ ಸಿಎಎ ವಿರೋಧಿ ನಿಳುವಳಿ ಅಂಗೀಕಾರಗೊಂಡಿದೆ. ಈ ಮೂಲಕ ಪಂಜಾಬ್, ಕೇರಳ ಮತ್ತು ರಾಜಸ್ಥಾನಗಳ ಬಳಿಕ ಸಿಎಎ ಜಾರಿ ವಿರುದ್ಧ ನಿಲುವಳಿ ಅಂಗೀಕರಿಸಿದ ನಾಲ್ಕನೇ ರಾಜ್ಯವಾಗಿ ಪಶ್ಚಿಮ ಬಂಗಾಲ ಮೂಡಿಬಂದಿದೆ.

ಈ ನಿಲುವಳಿ ಅಂಗೀಕಾರವಾದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜಸಂಖ್ಯಾ ದಾಖಲಾತಿ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್.ಸಿ.ಆರ್.) ಇವು ಮೂರನ್ನೂ ಸಹ ತನ್ನ ರಾಜ್ಯದಲ್ಲಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಇದು ಕೇವಲ ಮುಸ್ಲಿಮರು ನಡೆಸುತ್ತಿರುವ ಪ್ರತಿಭಟನೆಯಲ್ಲ, ಇದು ನಮ್ಮೆಲ್ಲರ ಪ್ರತಿಭಟನೆಯಾಗಿದೆ ಮತ್ತು ಈ ಪ್ರತಿಭಟನೆಯ ಮುಂಚೂಣಿಯಲ್ಲಿರುವ ನನ್ನೆಲ್ಲಾ ಹಿಂದೂ ಸಹೋದರರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ‘ನಾವು ಸಿಎಎ, ಎನ್.ಪಿ.ಆರ್. ಮತ್ತು ಎನ್.ಆರ್.ಸಿ.ಗಳಿಗೆ ನಮ್ಮ ರಾಜ್ಯದಲ್ಲಿ ಅವರಕಾಶ ನೀಡುವುದಿಲ್ಲ ಮತ್ತು ನಾವು ಶಾಂತಿಯುತವಾಗಿಯೇ ಹೋರಾಡುತ್ತೇವೆ’ ಎಂದೂ ದೀದಿ ಇದೇ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಜನವರಿ 25ರಂದು ಸಿಎಎ ವಿರುದ್ಧ ರಾಜಸ್ಥಾನ ಸರಕಾರ ವಿಧಾನಸಭೆಯಲ್ಲಿ ನಿಲುವಳಿಯನ್ನು ಅಂಗೀಕಾರಗೊಳಿಸಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...