ಚಂದ್ರಬಾಬು ನಾಯ್ಡು ದೇಶದ ಸಿರಿವಂತ ಸಿಎಂ
Team Udayavani, Feb 14, 2018, 9:22 AM IST
ಹೊಸದಿಲ್ಲಿ: ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಶನ್ ಆಫ್ ಡೆಮಾಕ್ರಾಟಿಕ್ ರಿಫಾಮ್ಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು 177 ಕೋಟಿ ರೂ.ಮೌಲ್ಯದ ಆಸ್ತಿ ಹೊಂದಿರುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 13.61 ಕೋಟಿ ರೂ.ಮೌಲ್ಯದ ಆಸ್ತಿ ಹೊಂದುವ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 6ನೇ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಅರುಣಾಚಲ ಸಿಎಂ ಪೆಮಾ ಖಂಡು ಇದ್ದಾರೆ. ಅವರ ಆಸ್ತಿ ಮೌಲ್ಯ 129 ಕೋಟಿ ರೂ. ತ್ರಿಪುರಾ ಸಿಎಂ ಮಾಣಿಕ್ ಸರ್ಕಾರ್ 26 ಲಕ್ಷ ರೂ.ಮೌಲ್ಯದ ಆಸ್ತಿ ಹೊಂದಿದ್ದಾರೆ. ಪಂಜಾಬ್ ಸಿಎಂ ಅಮರೀಂದರ್ ಸಿಂಗ್ 48 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಇನ್ನು ಗಂಭೀರ ಪ್ರಕರಣಗಳು ಹೆಚ್ಚು ದಾಖಲಾಗಿರುವ ಮುಖ್ಯಮಂತ್ರಿಗಳ ಪೈಕಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮೊದಲ ಸ್ಥಾನದಲ್ಲಿದ್ದಾರೆ. ಅವರ ವಿರುದ್ಧ 21 ಕೇಸುಗಳಿವೆ. ಕೇರಳ ಸಿಎಂ ಪಿಣರಾಯಿ ವಿಜಯನ್ 11, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ 10 ಕೇಸುಗಳಿವೆ. 31 ಮುಖ್ಯಮಂತ್ರಿಗಳ ಪೈಕಿ 20 ಮಂದಿಯ ಹಿನ್ನೆಲೆ ಉತ್ತಮವಾಗಿದೆ ಎಂದು ಎಡಿಆರ್ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು