ನಂಬಿದ್ರೆ ನಂಬಿ! ಬಾಯಿಯ ಚಿಕಿತ್ಸೆ ವೇಳೆ ಸ್ಫೋಟಗೊಂಡು ಮಹಿಳೆ ಸಾವು

Team Udayavani, May 16, 2019, 6:52 PM IST

Representative Image

ಉತ್ತರಪ್ರದೇಶ: ಈ ಘಟನೆಯನ್ನು ನಂಬಿದರೆ ನಂಬಿ, ಇಲ್ಲವೇ ಬಿಡಿ. ಮಹಿಳೆಯೊಬ್ಬಳ ಬಾಯಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿರುವ ವೇಳೆ ಸ್ಫೋಟಗೊಂಡ ಪರಿಣಾಮ ಆಕೆ ಸಾವನ್ನಪ್ಪಿರುವ ವಿಚಿತ್ರ ಘಟನೆ ಉತ್ತರಪ್ರದೇಶದ ಅಲಿಗಢ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬುಧವಾರ ಸಂಜೆ ಅಲಿಗಢ್ ನಲ್ಲಿರುವ ಜೆಎನ್ ಮೆಡಿಕಲ್ ಕಾಲೇಜಿಗೆ ವಿಷ ಸೇವಿಸಿದ್ದ ಮಹಿಳೆಯೊಬ್ಬರನ್ನು ತಂದು ದಾಖಲಿಸಿದ್ದರು. ಕೂಡಲೇ ವೈದ್ಯರ ತಂಡ ಚಿಕಿತ್ಸೆ ನೀಡಲು ಆರಂಭಿಸಿದ್ದು, ಹೀರಿಕೆಯ ಪೈಪ್ (ಸಕ್ಸನ್ ಪೈಪ್) ಅನ್ನು ಬಾಯಿಯೊಳಗೆ ತೂರಿಸಿದ್ದರು. ಈ ವೇಳೆ ಸ್ಫೋಟ ಸಂಭವಿಸಿ ಮಹಿಳೆ ಸಾವನ್ನಪ್ಪಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ವಿವರಿಸಿದೆ.

ಈ ಮಹಿಳೆ ಸಲ್ಫರಿಕ್ ಆ್ಯಸಿಡ್ ಸೇವನೆ ಮಾಡಿದ್ದು, ಟ್ರೀಟ್ ಮೆಂಟ್ ವೇಳೆ ಹೀರಿಕೆಯ ಪೈಪ್ ಮೂಲಕ ಆಕ್ಸಿಜನ್ ಸಂಪರ್ಕವಾಗುವ ಮೂಲಕ ಸ್ಫೋಟ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ ಘಟನೆ ಬಗ್ಗೆ ನಿಜವಾದ ಕಾರಣ ಏನು ಎಂಬುದನ್ನು ತನಿಖೆಯ ನಂತರ ಬಹಿರಂಗಪಡಿಸುವುದಾಗಿ ಆಸ್ಪತ್ರೆಯ ವಕ್ತಾರೊಬ್ಬರು ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕೋಲಾರ: ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುಕ್ತ ಮಾಡಿಸಿ ಬಿಜೆಪಿ...

  • ಬ್ಯಾಡಗಿ: ವೀರಯೋಧ ಶಿವಲಿಂಗೇಶ ಪಾಟೀಲ ನಿಧನದ ಸುದ್ದಿ ಗುಂಡೇನಹಳ್ಳಿ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದ್ದು, ಇದೀಗ ಸ್ಮಶಾನ ಮೌನ ಆವರಿಸಿದೆ. ಯೋಧ ಶಿವಲಿಂಗೇಶ...

  • ಹಾವೇರಿ: ಮಳೆ ಆರಂಭಕ್ಕೂ ಮುನ್ನವೇ ಡೆಂಘೀ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆರೋಗ್ಯ, ಶಿಕ್ಷಣ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ...

  • ಸಕಲೇಶಪುರ: ತಾಲೂಕಿನಲ್ಲಿ ಅನುಷ್ಠಾನಗೊಳಿಸ ಲಾಗುತ್ತಿರುವ ಎತ್ತಿನಹೊಳೆ ಸಮಗ್ರ ನೀರಾವರಿ ಯೋಜನೆಯಿಂದ ಮಲೆನಾಡಿನ ಪರಿಸರ ಹದಗೆಡಲು ಕಾರಣವಾಗಿದೆ ಎಂಬ ಮಾತುಗಳು...

  • ಹಾಸನ: ನಗರದ ಎಪಿಎಂಸಿ ಪ್ರಾಂಗಣದಲ್ಲಿ ಬಿತ್ತನೆ ಆಲೂಗಡ್ಡೆ ವ್ಯಾಪಾರ ಆರಂಭವಾಗಿ ಎರಡು ವಾರ ಗಳಾಗುತ್ತಾ ಬಂದರೂ ಆಲೂಗಡ್ಡೆ ಖರೀದಿಗೆ ರೈತರಿಂದ ನೀರಸ ಪ್ರತಿಕ್ರಿಯೆ...

  • ನರೇಗಲ್ಲ: ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸಂಚಾರಿ ಸುರಕ್ಷಾ ಸಪ್ತಾಹ ಅಡಿಯಲ್ಲಿ ರವಿವಾರ ವಿಶೇಷ ಕಾರ್ಯಾಚರಣೆ ನಡೆಸಿ ಆಟೋಗಳ ದಾಖಲೆಗಳನ್ನು ನರಗುಂದ ಡಿವೈಎಸ್‌ಪಿ...