ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಗುಂಡಿನ ದಾಳಿ: ಮಹಿಳೆಗೆ ಗಾಯ
Team Udayavani, May 4, 2018, 12:03 PM IST
ಶ್ರೀನಗರ : ಜಮ್ಮು ಕಾಶ್ಮೀರದ ತಂಗದಾರ್ ವಲಯದಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಸೈನಿಕರು ಭಾರತೀಯ ಸೇನಾ ಠಾಣೆಗಳನ್ನು ಗುರಿ ಇರಿಸಿ ನಡೆಸಿರುವ ಅಪ್ರಚೋದಿತ ಗುಂಡಿನ ದಾಳಿಗೆ ಮಹಿಳೆಯೊಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ನಿನ್ನೆ ಗುರುವಾರ ರಾತ್ರಿ 11 ಗಂಟೆಯ ಹೊತ್ತಿಗೆ ಆರಂಭಿಸಿದ ಗುಂಡಿನ ದಾಳಿಯನ್ನು ಪಾಕ್ ಸೈನಿಕರು ಇಂದು ಶುಕ್ರವಾರ ಬೆಳಗ್ಗೆ 5 ಗಂಟೆಯ ವರೆಗೂ ಮುಂದುವರಿಸಿದರು.
ಪಾಕ್ ಸೈನಿಕರು ಎಸೆದ ಕೆಲವೊಂದು ಶೆಲ್ಗಳು ನಾಗರಿಕರ ವಸತಿ ಪ್ರದೇಶಗಳಲ್ಲಿ ಬಂದು ಬಿದ್ದವು. ಸೈದ್ಪೋರಾ ತಾಡ್ ನಿವಾಸಿಯಾಗಿರುವ ನೂರ್ ಜಹಾನ್ ಎಂಬ ಮಹಿಳೆ ಗಾಯಗೊಂಡಳು ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕ್ ಸೈನಿಕರ ಗುಂಡಿನ ದಾಳಿಗೆ ಭಾರತೀಯ ಸೈನಿಕರು ತಕ್ಕುದಾದರ ರೀತಿಯಲ್ಲಿ ಗುಂಡಿನ ಉತ್ತರ ನೀಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು