ಮುಜಫರನಗರ: ಮನೆಯಲ್ಲಿದ್ದ ಮಹಿಳೆಗೆ ಗುಂಡೆಸೆದು ಹತ್ಯೆ
Team Udayavani, Dec 9, 2017, 12:09 PM IST
ಮುಜಫರನಗರ : ಇಪ್ಪತ್ತೈದರ ಹರೆಯದ ಮಹಿಳೆಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಶಾಮ್ಲಿ ಜಿಲ್ಲೆಯ ಅಕ್ಬರ್ಪುರ ಸುನೀತಿ ಗ್ರಾಮದಲ್ಲಿನ ಆಕೆಯ ಮನೆಯಲ್ಲಿ ಗುಂಡೆಸೆದು ಕೊಂದಿರವ ಘಟನೆ ವರದಿಯಾಗಿದೆ.
ಸಮೀನಾ ನಿನ್ನೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಬೈಕಿನಲ್ಲಿ ಆಕೆಗೆ ಮನೆಗೆ ಬಂದ ನಾಲ್ವರು ಆಕೆಯನ್ನು ಗುಂಡೆಸೆದು ಕೊಂದು ಬಳಿಕ ಪರಾರಿಯಾದರು. ಸಮೀನಾ ಸ್ಥಳದಲ್ಲೇ ಕುಸಿದು ಬಿದ್ದು ಅಸುನೀಗಿದಳೆಂದು ಪೊಲೀಸರು ತಿಳಿಸಿದ್ದಾರೆ.
ಸಮೀನಾಳ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ; ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆ ಕೃತ್ಯಕ್ಕೆ ಕಾರಣವೇನೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್