
Women’s ಮೀಸಲಾತಿ ಮಸೂದೆ ನಮ್ಮದು: ಸೋನಿಯಾ ಗಾಂಧಿ
Team Udayavani, Sep 19, 2023, 7:45 PM IST

ನವದೆಹಲಿ: ಕೇಂದ್ರಸರ್ಕಾರ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು “ಈ ಮಸೂದೆ ತಮ್ಮದು'(ಆಪ್ನ ಹೈ) ಎಂದು ಹೇಳಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ವಿಧೇಯಕಕ್ಕೆ ಅನುಮೋದನೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್‌ನ ಹಲವು ನಾಯಕರು ವಿಧೇಯಕ ಮಂಡನೆಯಾದರೆ ಅದನ್ನು ಪೂರ್ಣ ಮನಸ್ಸಿಂದ ಸ್ವೀಕರಿಸಿರುವುದಾಗಿಯೂ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಸೋನಿಯಾ, ಈ ಮಸೂದೆ ನಮ್ಮದು ಎಂದಿದ್ದಾರೆ. 2010ರ ಮಾರ್ಚ್ 9ರಂದು ಅಂದಿನ ಯುಪಿಎ ಸರ್ಕಾರ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸುತ್ತು ಆದರೆ, ಲೋಕಸಭೆಯಲ್ಲಿ ಈ ವಿಷಯ ಕೈಗೆತ್ತಿಕೊಳ್ಳುವಲ್ಲಿ ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಮಸೂದೆ ತಮ್ಮದು ಎಂದಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸಿ.ಟಿ.ರವಿ ಲೇವಡಿ ಮಾಡಿದ್ದು, ಮುಂದೇನು ಸೂರ್ಯ, ಚಂದ್ರ, ನಕ್ಷತ್ರಗಳೂ ನಿಮ್ಮವೇ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
